ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ, ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವಂತ ಸಂತ್ರಸ್ತೆಯರ ನೆರವಿಗಾಗಿ, ಎಸ್ಐಟಿಯಿಂದ ಸಹಾಯವಾಣಿಯನ್ನು ಆರಂಭಿಸಲಾಗಿದೆ.
ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಎಸ್ಐಟಿ ಮುಖ್ಯಸ್ಥ ಬಿ.ಕೆ ಸಿಂಗ್ ಅವರು, ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತ ತನಿಖೆಗಾಗಿ ಎಸ್ಐಟಿ ತಂಡವನ್ನು ಈಗಾಗಲೇ ಸರ್ಕಾರದ ನಿರ್ದೇಶದಂತೆ ರಚಿಸಲಾಗಿದೆ. ಸಂತ್ರಸ್ತೆಯರ ನೆರವಿಗಾಗಿ 6360938947 ಸಹಾಯವಾಣಿ ಸಂಖ್ಯೆ ಆರಂಭಿಸಿರೋದಾಗಿ ತಿಳಿಸಿದ್ದಾರೆ.
ಇನ್ನೂ ಸಂತ್ರಸ್ತೆಯರು ಹಾಗೂ ಅವರಿಗೆ ಸಂಬಂಧಪಟ್ಟಂತ ವ್ಯಕ್ತಿಗಳು 6360938947ಗ ಸಹಾಯವಾಣಿಗೆ ಕರೆ ಮಾಡಿ, ದೂರು ನೀಡಬಹುದಾಗಿದೆ. ಸಂತ್ರಸ್ತೆಯರಿಗೆ ಅಗತ್ಯವಿರುವಂತ ಕಾನೂನು ನೆರವು, ರಕ್ಷಣೆ ಹಾಗೂ ಇತರೆ ಸಹಾಯ ಮಾಡಲು ನಾವು ಸಿದ್ಧರಿದ್ದೇವೆ. ಕೃತ್ಯದ ಬಗ್ಗೆ ದೂರು ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.
‘ಹೆಚ್.ಡಿ.ರೇವಣ್ಣ ಬಂಧನ’ದ ಬಗ್ಗೆ ಶಾಕಿಂಗ್ ರಿಯಾಕ್ಷನ್ ಕೊಟ್ಟ ‘ಕಾಂಗ್ರೆಸ್ ಶಾಸಕ ರವಿ ಗಣಿಗ’
ಅಂಬೇಡ್ಕರ್ ಅವರನ್ನು ಸೋಲಿಸಿ ಅವಮಾನ ಮಾಡಿದ್ದು ಕಾಂಗ್ರೆಸ್: ಬಸವರಾಜ ಬೊಮ್ಮಾಯಿ