ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಪೆನ್ ಡ್ರೈವ್ ಹಂಚಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದೀಗ ವಿದೇಶದಲ್ಲಿ ಮರೆಸಿಕೊಂಡಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ ಡಿ ದೇವೇಗೌಡ ಅವರು ಪ್ರಜ್ವಲ್ ರೇವಣ್ಣ ವಿದೇಶದಿಂದ ಬೇಗ ವಾಪಸ್ ಆಗಬೇಕು ಎಂದು ಮೂಲಕ ವಾರ್ನಿಂಗ್ ಕೊಟ್ಟಿದ್ದಾರೆ.

ಹೌದು ಟ್ವೀಟ್ ಮೂಲಕ ಮೊಮ್ಮಗ ಪ್ರಜ್ವಲ್ ರೇವಣ್ಣಗೆ ವಾರ್ನಿಂಗ್ ಕೊಟ್ಟ ದೇವೇಗೌಡರು ಕೂಡಲೇ ಪ್ರಜ್ವಲ್ ರೇವಣ್ಣ ವಾಪಸ್ ಬರಬೇಕು. ಪ್ರಜ್ವಲ್ ನನ್ನ ತಾಳ್ಮೆಯನ್ನು ಪರೀಕ್ಷೆ ಮಾಡಬಾರದು. ಬಂದು ವಿಚಾರಣೆ ಎದುರಿಸಬೇಕು. ವಿದೇಶದಿಂದ ಕೂಡಲೇ ವಾಪಸ್ ಆಗುವಂತೆ ಹೆಚ್ ಡಿ ದೇವೇಗೌಡ ಟ್ವೀಟ್ ಮೂಲಕಪ್ರಜ್ವಲ್ ರೇವಣ್ಣಗೆ ಬರೆದ ಪತ್ರವನ್ನು ಪೋಸ್ಟ್ ಮಾಡಿ ಎಚ್ ಡಿ ದೇವೇಗೌಡ ಅವರು ಪೋಸ್ಟ್ ಮಾಡಿದ್ದಾರೆ.

ಅಲ್ಲದೆ ಇತ್ತೀಚಿಗೆ ಸುದ್ದಿಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕೂಡ ಪ್ರಜ್ವಲ್ ಎಲ್ಲಿದ್ದರೂ ಬಂದು ವಿಚಾರಣೆ ಎದುರಿಸು ಎಂದು ಮನವಿ ಮಾಡಿದ್ದರು.ಅಲ್ಲದೆ ಇದೀಗ ಕುಮಾರಸ್ವಾಮಿ ಅವರು ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.ಇದೀಗ HD ದೇವೇಗೌಡ ಅವರು ಕೂಡ ಟ್ವೀಟ್ ಮೂಲಕ ಪ್ರಜ್ವಲ್ ರೇವಣ್ಣಗೆ ವಾರ್ನಿಂಗ್ ಕೊಟ್ಟಿದ್ದಾರೆ. ವಿದೇಶದಲ್ಲಿ ಎಲ್ಲಿದ್ದರೂ ಬಂದು ವಿಚಾರಣೆಗೆ ಹಾಜರಾಗುವ ಎಂದು ತಿಳಿಸಿದ್ದಾರೆ.

Share.
Exit mobile version