ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಅವರು ರಾಜ್ಯಕ್ಕೆ ಮೇ 7ರ ನಂತ್ರ ಬರುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಾಹಿತಿ ಪ್ರಕಾರ ಚುನಾವಣೆ ಬಳಿಕ, ಅಂದರೆ ಮೇ 7ರ ನಂತ್ರ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. 2ನೇ ಹಂತದ ಮತದಾನ ಬಳಿಕ ಪ್ರಜ್ವಲ್ ಶರಣಾಗತಿಯಾಗುವ ಸಾಧ್ಯತೆಯೂ ಇದೆ. ಈ ಮಧ್ಯೆ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲು ಸಿಬಿಐಗೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಮನವಿ ಮಾಡಿದ್ದಾರೆ. ಪ್ರಜ್ವಲ್​ಗೆ ನೋಟಿಸ್ ನೀಡಲು ಮಹಿಳಾ ಆಯೋಗವೂ ಸಿದ್ಧತೆ ನಡೆಸಿದೆ.

ವಿದೇಶದಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣನವರು ಮತದಾನದ ಬಳಿಕ ರಾಜ್ಯಕ್ಕೆ ಆಗಮಿಸಲಿದ್ದು, ಎಸ್ ಐಟಿ ಅಧಿಕಾರಿಗಳ ಮುಂದೆ ಶರಣಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ ಪ್ರಜ್ಚಲ್‌ ರೇವಣ್ಣ ಭಾರತಕ್ಕೆ ಆಗಮಿಸದೇ ಹೋದರೆ ಸಿಬಿಐ ನೇರವಿನೊಂದಿಗೆ ರಾಜ್ಯದ ಪೊಲೀಸರು ಅವರು ಇರುವ ಜಾಗಕ್ಕೆ ಹೋಗಿ ಅವರನ್ನು ತಮ್ಮ ವಶಕ್ಕೆಪಡೆದುಕೊಂಡು ರಾಜ್ಯಕ್ಕೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಜ್ವಲ್ ವಿರುದ್ಧ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಸ್ಥಳೀಯ ಸಂಸ್ಥೆಗಳ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಎಫ್ ಐಆರ್ ದಾಖಲಾಗಿದೆ.

Share.
Exit mobile version