ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೆವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳಿಗೆ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಮನೆಯಲ್ಲಿ ಪೆನ್ ಡ್ರೈವ್ ಸೇರಿದಂತೆ ಹಲವು ದಾಖಲೆಗಳು ಪತ್ತೆಯಾಗಿವೆ.
ಪ್ರಕರಣ ತನಿಖೆ ನಡೆಸುತ್ತಿರುವ ಎಸ್ ಐಟಿ ಪ್ರೀತಂಗೌಡ ಆಪ್ತರ ಮನೆಗಳ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಹಲವು ದಾಖಲೆಗಳು ಸೇರಿದಂತೆ ಹತ್ತಕ್ಕೂ ಹೆಚ್ಚು ಪೆನ್ ಡ್ರೈವ್ ಗಳು ಪತ್ತೆಯಾಗಿವೆ ಎನ್ನಲಾಗಿದೆ.
ಪೆನ್ ಡ್ರೈವ್ ಅಷ್ಟೇ ಅಲ್ಲದೇ ಹಾರ್ಡ್ ಡಿಸ್ಕ್ ಗಳನ್ನು ಪತ್ತೆ ಹಚ್ಚಿರುವ ಎಸ್ ಐಟಿ ಅಧಿಕಾರಿಗಳು, ಇದೀಗ ಪೆನ್ ಡ್ರೈವ್ ಸೇರಿದಂತೆ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.