ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿರುವಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ ಎನ್ನುವಂತೆ ಆಗಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ತಮ್ಮ ವಕೀಲರ ಮೂಲಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ನಡೆಸಿ, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ಲೈಂಗಿಕ ದೌರ್ಜನ್ಯದಲ್ಲಿನ ಎರಡನೇ ಪ್ರಕರಣದಲ್ಲೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜಾಮೀನು ಸಿಗದೇ, ಜೈಲೇ ಗತಿ ಎನ್ನುವಂತೆ ಆಗಿದೆ.
‘ಸಿಎಂ ಸಿದ್ಧರಾಮಯ್ಯ’ ನಿರ್ಧಾರದಿಂದಲೇ ‘ಕೇಂದ್ರ ಬಜೆಟ್’ನಲ್ಲಿ ರಾಜ್ಯಕ್ಕೆ ಅನ್ಯಾಯ: ಬಿವೈ ವಿಜಯೇಂದ್ರ
ರಾಜ್ಯದ ‘ಉಭಯ ಸದನ’ಗಳಲ್ಲಿ ‘ಮುಡಾ ಹಗರಣ’ ಪ್ರತಿಧ್ವನಿ: ‘ಸಾಕು ಸಾಕು ಲೂಟಿ ಸಾಕು’ ಎಂದು ಘೋಷಣೆ