ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅತ್ಯಾಚಾರ ಪ್ರಕರಣ ಸಂಬಂಧ ಇಂದು ಕೂಡ ಕೋರ್ಟ್ ನಿಂದ ರಿಲೀಫ್ ಸಿಕ್ಕಿಲ್ಲ. ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೂನ್.24ಕ್ಕೆ ಮುಂದೂಡಿಕೆ ಮಾಡಿದೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಎರನೇಡ ಕೇಸ್ ನಲ್ಲಿ ಎಸ್ಐಟಿ ಅಧಿಕಾರಿಗಳು ಬಾಡಿ ವಾರೆಂಟ್ ಪಡೆದು, ಇಂದು ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.

ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಜೂನ್.24ಕ್ಕೆ ಮುಂದೂಡಿಕೆ ಮಾಡಿದೆ.

ಇದೇ ವೇಳೆ ನ್ಯಾಯಮೂರ್ತಿಗಳು, ನಿಮಗೆ ಆರೋಗ್ಯ ಸಮಸ್ಯೆ ಇದೆಯೇ ಎಂದು ವಿಚಾರಿಸಿದ್ದಾರೆ. ಈ ವೇಳೆ ಪ್ರಜ್ವಲ್ ಉಸಿರಾಟದ ಸಮಸ್ಯೆ ಇದೆ. ಎಂಆರ್‍ಐ ಮಾಡಿಸಬೇಕಿದೆ ಎಂದು ಹೇಳಿದ್ದಾರೆ. ನಾನು ಎರಡು ಕೇಸ್‍ನಲ್ಲಿ ಪುರುಷತ್ವ ಪರೀಕ್ಷೆ ಒಪ್ಪಿ ಮಾಡಿಸಿಕೊಂಡಿದ್ದೇನೆ. ಇದರಿಂದ ತುಂಬಾ ಮುಜುಗರ ಆಗತ್ತೆ. ಮತ್ತೆ ಅದೇ ಟೆಸ್ಟ್ ಮಾಡಿಸಲು ಹೇಳ್ತಾರೆ. ಈಗಾಗಲೇ ಎರಡು ಬಾರಿ ಒಂದೇ ಟೆಸ್ಟ್ ಮಾಡಲಾಗಿದೆ ಎಂದು ಅವರು ಜಡ್ಜ್ ಮುಂದೆ ಅಳಲು ತೋಡಿಕೊಂಡಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.

ಜನಸಾಮಾನ್ಯರಿಗೆ ʻದುಬಾರಿ ದುನಿಯಾʼ : ದವಸ, ಧಾನ್ಯಗಳು ಸೇರಿ ಅಗತ್ಯ ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆ |

ಮೋದಿ ಪ್ರಧಾನಿಯಾದ ಬೆನ್ನಲ್ಲೇ ಷೇರು ಮಾರುಕಟ್ಟೆ ಸಂಚಲನ : 5 ಟ್ರಿಲಿಯನ್ ಡಾಲರ್ ದಾಟಿದ ಮಾರುಕಟ್ಟೆ ಕ್ಯಾಪ್ | PM Modi

Share.
Exit mobile version