ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದಂತ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಹೈಕೋರ್ಟ್ 2 ವಾರಗಳ ಕಾಲ ಮುಂದೂಡಿದೆ. ಈ ಮೂಲಕ ನಿರೀಕ್ಷಣಾ ಜಾಮೀನು ನಿರೀಕ್ಷೆಯಲ್ಲಿದ್ದಂತ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಲಾಗಿದೆ.

ಇಂದು ಹೈಕೋರ್ಟ್ ನಲ್ಲಿ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮತ್ತೊಂದು ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ನ್ಯಾಯಪೀಠವು ವಿಚಾರಣೆ ನಡೆಸಿತು.

ಈ ವೇಳೆ ಪ್ರಜ್ವಲ್ ರೇವಣ್ಣ ಪರ ವಕೀಲರು ಒಂದು ಪ್ರಕರಣದಲ್ಲಿ ಮಾತ್ರವೇ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲಾಗಿದೆ. ಉಳಿದ ಕೇಸ್ ಗಳಲ್ಲಿ ಬಾಡಿ ವಾರೆಂಟ್ ಮೂಲಕ ಕಸ್ಟಡಿಗೆ ಪಡೆಯಲಾಗಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪರಿಗಣಿಸುವಂತೆ ಹೈಕೋರ್ಟ್ ನ್ಯಾಯಪೀಠಕ್ಕೆ ಮನವಿ ಮಾಡಿದರು.

ಈ ವಾದ ಆಲಿಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರು, ಜಾಮೀನು ಅರ್ಜಿಯ ಸಂಬಂಧ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಎಸ್ಐಟಿಗೆ ಸೂಚನೆ ನೀಡಿದರು. ಅಲ್ಲದೇ ತನಿಖೆ ನಡೆಯುತ್ತಿದೆ. ಶೀಘ್ರವೇ ವಿಚಾರಣೆ ಅಗತ್ಯವಿಲ್ಲ ಎಂಬುದಾಗಿ ಹೇಳುವ ಮೂಲಕ ನಿರೀಕ್ಷಣಾ ಜಾಮೀನು ಅರ್ಜಿಯನ್ನು 2 ವಾರಗಳ ಕಾಲ ಮುಂದೂಡಿದರು.

BIG NEWS : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಸಿ.ಪಿ.ಯೋಗೇಶ್ವ‌ರ್‌ ಬಿಜೆಪಿ ಅಭ್ಯರ್ಥಿ?

ಬೆಂಗಳೂರಿಗರೇ ಹುಷಾರ್ : ಇನ್ನುಮುಂದೆ ಎಲ್ಲೆಂದರಲ್ಲಿ ಕಸ ಬೀಸಾಡಿದರೆ ಬೀಳುತ್ತೆ ಭಾರಿ ದಂಡ!

Share.
Exit mobile version