ಬೆಂಗಳೂರು: ರಾಜ್ಯ ಸರ್ಕಾರದಿಂದ ಸಂಸದ ಪ್ರಜ್ವಲ್ ರೇವಣ್ಣ ಅವರ ವೀಡಿಯೋ ಎನ್ನಲಾದಂತ ರಾಸಲೀಲೆ ಪ್ರಕರಣವನ್ನುಎಸ್ ಐಟಿ ತನಿಖೆಗೆ ವಹಿಸಿ ಅಧಿಕೃತ ಆದೇಶ ಮಾಡಲಾಗಿದೆ. ಅಲ್ಲದೇ ಸಿಐಡಿಯ ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ ಆದೇಶಿಸಿದೆ.
ಇಂದು ಈ ಸಂಬಂಧ ಆದೇಶವನ್ನು ಹೊರಡಿಸಲಾಗಿದ್ದು, ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಖಾಸಗಿ ವಿಡಿಯೋ ಚಿತ್ರೀಕರಣವು ಮಾಧ್ಯಮಗಳಲ್ಲಿ ಪಚಾರವಾಗಿದ್ದು, ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಚಿತ್ರೀಕರಣ ಮಾಡಿದ ವ್ಯಕ್ತಿಗಳು ಮತ್ತು ಅದನ್ನು ಸಾರ್ವಜನಿಕ ಪಡಿಸಿದ ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸುವ ಮೂಲಕ ಮಹಿಳೆಯರ ಘನತೆ ಹಾಗೂ ಅಸ್ತಿತ್ವಕ್ಕೆ ಹಾನಿ ಉಂಟು ಮಾಡುತ್ತಿರುವವರನ್ನು ಶೀಘ್ರವಾಗಿ ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಲು ಆದೇಶ ನೀಡಬೇಕೆಂದು ಹಾಗೂ ಆರೋಪಿಗಳ ವಿರುದ್ಧ ಕಠಿಣ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು ರವರು ಕೋರಿರುತ್ತಾರೆ ಎಂದಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ: 107/2024 ಕಲಂ 354A, 354D, 506, 509 ಐಪಿಸಿ ರಡಿ ದಿನಾಂಕ:28.04.2024ರಂದು ಪ್ರಕರಣವು ದಾಖಲಾಗಿರುತ್ತದೆ ಎಂದು ಹೇಳಿದೆ.
ಈ ಹಿನ್ನೆಲೆಯಲ್ಲಿ ಪುಸ್ತಾವನೆಯನ್ನು ಪರಿಶೀಲಿಸಲಾಗಿ, ಪ್ರಕರಣದ ಸಮಗ್ರ ತನಿಖೆಯನ್ನು ಕೈಗೊಳ್ಳಲು ತಾಂತ್ರಿಕ ಪರಿಣಿತಿ ಇರುವ ರಾಜ್ಯದ ವಿಶೇಷ ತನಿಖಾ ಸಂಸ್ಥೆಯಾದ ಸಿಐಡಿಯ ಒಂದು ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸುವುದು ಸೂಕ್ತವೆಂದು ಸರ್ಕಾರವು ತೀರ್ಮಾನಿಸಿ, ಈ ಕೆಳಕಂಡಂತೆ ಆದೇಶಿಸಲಾಗಿದೆ ಎಂದು ತಿಳಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಹಾಗೂ ಈ ಸಂಬಂಧ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ:107/2024 ಕಲಂ 354A, 354D, 506, 509 ಐಪಿಸಿ ರಡಿ ದಾಖಲಾಗಿರುವ ಪ್ರಕರಣದ ಸಮಗ್ರ ತನಿಖೆಯನ್ನು ಕೈಗೊಳ್ಳಲು ತಾಂತ್ರಿಕ ಪರಿಣಿತಿ ಇರುವ ರಾಜ್ಯದ ವಿಶೇಷ ತನಿಖಾ ಸಂಸ್ಥೆಯಾದ ಸಿಐಡಿಯ ಒಂದು ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸಿ ಸರ್ಕಾರವು ಆದೇಶಿಸಿದೆ ಎಂದಿದೆ.
1.ಬಿಜಯ ಕುಮಾರ್ ಸಿಂಗ್, ಐಪಿಎಸ್. ಅವರ ಪೊಲೀಸ್ ಮಹಾ ನಿರ್ದೇಶಕರು, ಸಿಐಡಿ, ಬೆಂಗಳೂರು- ಮುಖ್ಯಸ್ಥರು
2.ಸುಮನ್ ಡಿ ಪೆನ್ನೇಕರ್, ಐಪಿಎಸ್, ಸಹಾಯಕ ಪೊಲೀಸ್ ಮಹಾ ನಿರೀಕ್ಷಕರು, ಪೊಲೀಸ್ ಪ್ರಧಾನ ಕಛೇರಿ, ಬೆಂಗಳೂರು- ಸದಸ್ಯರು
3. ಸೀಮಾ ಲಾಠ‌್ಕರ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಮೈಸೂರು ಜಿಲ್ಲೆ- ಸದಸ್ಯರು
ಈ ಪ್ರಕರಣದ ಕುರಿತು ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ | ದಾಖಲಾಗಬಹುದಾದ ಪಕರಣಗಳನ್ನು ಡಿಜಿ & ಐಜಿಪಿ ರವರು ಈ ವಿಶೇಷ ತನಿಖಾ ತಂಡ (Special Investigation Team) ಕ್ಕೆ ವರ್ಗಾಯಿಸುವುದು ಹಾಗೂ ವಿಶೇಷ ತನಿಖಾ ತಂಡಕ್ಕೆ ಪ್ರಕರಣದ ತನಿಖೆಗಾಗಿ ಇತರೆ ಸದಸ್ಯರುಗಳ ಅವಶ್ಯವಿದ್ದಲ್ಲಿ ಡಿಜಿ & ಐಜಿಪಿ ರವರ ಅನುಮೋದನೆಯೊಂದಿಗೆ ತನಿಖಾ ತಂಡಕ್ಕೆ ಸೇರಿಸಿಕೊಳ್ಳುವುದು ಎಂದು ಹೇಳಿದೆ.
ವಿಶೇಷ ತನಿಖಾ ತಂಡವು (Special Investigation Team) ಸಿಐಡಿಯಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಳ್ಳುವುದು. ಪೊಲೀಸ್ ಮಹಾ ನಿರ್ದೇಶಕರು, ಸಿಐಡಿ, ರವರ ಮೇಲ್ವಿಚಾರಣೆಯಲ್ಲಿ ಈ ವಿಶೇಷ ತನಿಖಾ ತಂಡ (Special Investigation Team) ವು ಕಾರ್ಯನಿರ್ವಹಿಸುವುದು. ಎಸ್‌ಐಟಿ ತಂಡವು ಈ ಪ್ರಕರಣದ ಸಮಗ್ರ ತನಿಖೆಯನ್ನು ನಡೆಸಿ, ವರದಿಯನ್ನು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾ ನಿರೀಕ್ಷಕರು, ಬೆಂಗಳೂರು ರವರ ಮುಖಾಂತರ ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸತಕ್ಕದ್ದು ಎಂದು ತಿಳಿಸಿದೆ.
ಕಾಂಗ್ರೆಸ್ ರಾಜಕುಮಾರ ನಮ್ಮ ಮಹಾರಾಜರನ್ನ ಅವಮಾನಿಸ್ತಾರೆ, ನವಾಬರ ದೌರ್ಜನ್ಯ ಮರೆತು ಬಿಡ್ತಾರೆ : ಪ್ರಧಾನಿ ಮೋದಿ
ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್: ಮೋದಿಯವರೇ ಇದರ ಬಗ್ಗೆ ನಿಮ್ಮ ಮೌನವೇಕೆ? – ಮಂಜುಳಾ ನಾಯ್ಡು ಪ್ರಶ್ನೆ