ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಎಸ್ಐಟಿಯಿಂದ ತನಿಖೆಯನ್ನು ತೀವ್ರಗೊಳಿಸಿರೋ ಬೆನ್ನಲ್ಲೇ, ಏಪ್ರಿಲ್.8ರಂದೇ ನವೀನ್ ಗೌಡ ಎಂಬುವರು ಫೇಸ್ ಬುಕ್ ನಲ್ಲಿ ಪ್ರಜ್ವಲ್ ರೇವಣ್ಣ ವೀಡಿಯೋ ಬಿಡುಗಡೆಗೆ ಕ್ಷಣಗಣನೆ, 8am ಎಂಬುದಾಗಿ ಪೋಸ್ಟ್ ಮಾಡಿದ್ದ ವಿಷಯ ಬೆಳಕಿಗೆ ಬಂದಿದೆ.

ಇಂದು ಶಿವಮೊಗ್ಗದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಇದೊಂದು ಲೈಂಗಿಕ ದೌರ್ಜನ್ಯವಲ್ಲ. ಇದು ಸಾಮೂಹಿಕ ಅತ್ಯಾಚಾರವಾಗಿದೆ. ಪ್ರಜ್ವಲ್ 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರೋದಾಗಿ ಗುಡುಗಿದ್ದರು. ಅಲ್ಲದೇ ಇಂತವರಿಗೆ ಮತ ನೀಡಿ ಅಂತ ಪ್ರಧಾನಿ ಮೋದಿ ಹೇಳಿರೋ ಬಗ್ಗೆ ಕಿಡಿಕಾರಿದ್ದರು.

ಈ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ವೀಡಿಯೋ ಬಿಡುಗಡೆಗೆ ಕ್ಷಣಗಣನೆ, 8am ಎಂಬುದಾಗಿ ಫೇಸ್ ಬುಕ್ ನಲ್ಲಿ ಏಪ್ರಿಲ್.8ರಂದೇ ನವೀನ್ ಗೌಡ ಎಂಬುವರು ಪೋಸ್ಟ್ ಮಾಡಿದ್ದರ ಬಗ್ಗೆ ಮಾಹಿತಿ ದೊರೆತಿದೆ.

ಪ್ರಜ್ವಲ್ ರೇವಣ್ಣ ವೀಡಿಯೋ ಬಿಡುಗಡೆಯಾಗಿ, ಈ ಸಂಬಂಧ ಸಂತ್ರಸ್ತೆಯರಿಂದ ಪೊಲೀಸರಿಗೆ ದೂರು ನೀಡಿ, ಎಫ್ಐಆರ್ ದಾಖಲಾದ ಬೆನ್ನಲ್ಲೇ, ಈ ಪೋಸ್ಟ್ ಅನ್ನು ಡಿಲೀಟ್ ಮಾಡಿರೋ ನವೀನ್ ಗೌಡ, ತಮ್ಮ ಫೇಸ್ ಬುಕ್ ಖಾತೆಯನ್ನೇ ಡಿಲಿಟ್ ಮಾಡಿರೋದಾಗಿ ಹೇಳಲಾಗುತ್ತಿದೆ. ಈ ನಿಟ್ಟಿನಲ್ಲಿಯೂ ಎಸ್ಐಟಿ ಪೊಲೀಸರ ತನಿಖಾ ತಂಡ ವಿಚಾರಣೆ ನಡೆಸುತ್ತಿರೋದಾಗಿ ತಿಳಿದು ಬಂದಿದೆ.

ನವೀನ್ ಗೌಡ ಸಚಿವ ಜಮೀರ್ ಅಹ್ಮದ್ ಆಪ್ತ

ಅಂದಹಾಗೇ ನವೀನ್ ಗೌಡ ಸಚಿವ ಜಮೀರ್ ಅಹ್ಮದ್ ಅವರ ಆಪ್ತ ಎನ್ನಲಾಗುತ್ತಿದೆ. ಫೇಸ್ ಬುಕ್ ನಲ್ಲಿ ಅವರೊಂದಿಗೆ ಇರೋ ಪೋಟೋ ಕೂಡ ಹಂಚಿಕೊಂಡಿದ್ದಾರೆ.

ಇನ್ನೂ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್ ಡ್ರೈವ್ ಹಂಚಿದ ಆರೋಪದ ಮೇಲೆ ನವೀನ್ ಗೌಡ ಎಂಬಾತನಿಗೆ ವಿಶೇಷ ತನಿಖಾ ತಂಡ (SIT) ಅಧಿಕಾರಿಗಳು ನೋಟಿಸ್ ಕೊಟ್ಟಿದ್ದಾರೆ.

ಪೆನ್ ಡ್ರೈವ್ ಹಂಚಿಕೆ ಮಾಡಿರುವ ಆರೋಪದ ಮೇಲೆ ಹಾಸನ ಸೆನ್ ಪೊಲೀಸ್ ಠಾಣೆಯಲ್ಲಿ ನವೀನ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ನವೀನ್ ಗೌಡನನ್ನ ಎಸ್ ಐಟಿ ವಿಚಾರಣೆಗೆ ಕರೆದಿದೆ.ಮೇ.4 ರಂದು ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಲಾಗಿದೆ. ಜೊತೆಗೆ ಖುದ್ದು ಎಸ್ ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಕರೆ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ಕೂಡ ಕೊಟ್ಟಿದ್ದಾರೆ.

ಕ್ಯಾನ್ಸರ್ ಪ್ರಕರಣಗಳಿಗೆ 648 ಕೋಟಿ ಪರಿಹಾರ ನೀಡಲು `ಜಾನ್ಸನ್ & ಜಾನ್ಸನ್’ ಅಂಗಸಂಸ್ಥೆ ನಿರ್ಧಾರ

Prajwal Revanna: ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ವೀಡಿಯೋ ವೈರಲ್ ‘ಸೂತ್ರಧಾರಿ’ ಸುಳಿವು ಪತ್ತೆ

Share.
Exit mobile version