ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಇದೀಗ 9 ಸಂತ್ರಸ್ತೆಯರು ಎಸ್ಐಟಿ ವಿಚಾರಣೆಯಲ್ಲಿ ಸ್ಪೋಟಕವಾದ ಹೇಳಿಕೆ ನೀಡಿದ್ದು, ಪ್ರಜ್ವಲ್ 3 ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ ಎಸಿಗಿದ್ದಾರೆ ಎಂದು ತಿಳಿಸಿದ್ದಾರೆ.
ಹೌದು ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ 9 ಸಂತ್ರಸ್ತೇಯರು ಎಸ್ಐಟಿ ಎದುರಲ್ಲಿ ವಿಚಾರಣೆ ವೇಳೆ ಸ್ಪೋಟಕ ವಾದಂತಹ ಹೇಳಿಕೆ ನೀಡಿದ್ದು, ಪ್ರಜ್ವಲ್ ಮೂರು ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ ಎಸಿಗಿದ್ದಾರೆ ಎಂದು ಸಂತ್ರಸ್ತೆಯರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವಿಡಿಯೋವನ್ನು ಆಧರಿಸಿ 9 ಸಂತ್ರಸ್ತೆಯರನ್ನು ಗುರುತಿಸಿದ್ದು, ಇದೀಗ ಅವರಿಂದ ಹೇಳಿಕೆಗಳನ್ನು ಪಡೆಯುತ್ತಿದ್ದಾರೆ.ಅದರಲ್ಲಿ ಇಬ್ಬರು ಸರ್ಕಾರಿ ಅಧಿಕಾರಿಗಳು ಇದ್ದಾರೆ ಎನ್ನುವುದು ಅಘಾತಕಾರಿ ವಿಷಯವಾಗಿದೆ.
ವಿಚಾರಣೆ ವೇಳೆ ಎಸ್ಐಟಿ ಅಧಿಕಾರಿಗಳು, ಸಂತ್ರಸ್ತೆಯರಿಂದ ಹೇಳಿಕೆಗಳನ್ನು ಮಾತ್ರ ದಾಖಲಿಸಿಕೊಂಡಿದ್ದಾರೆ.ಅದರಂತೆ ಲೈಂಗಿಕ ದೌರ್ಜನ್ಯ 3 ವರ್ಷಗಳ ಅವಧಿಯಲ್ಲಿ ನಡೆದಿದೆ ಎಂಬ ಮಾಹಿತಿ ಸಿಕ್ಕಿದೆ. ಇದರಲ್ಲಿ ಇಬ್ಬರು ಸರ್ಕಾರಿ ಅಧಿಕಾರಿಗಳು ವರ್ಗಾವಣೆ ಬೇಕು ಎಂದು ಪ್ರಜ್ವಲ್ರನ್ನ ಭೇಟಿ ಮಾಡಿದ್ದರು. ಅವರ ಮೇಲೆ 2019 ರಿಂದ 2021ರ ತನಕ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನುವ ಮಾಹಿತಿ ಇದೆ. ಅಂದರೆ, ಪ್ರಜ್ವಲ್ ರೇವಣ್ಣ ಸಂಸದ ಆದಮೇಲೆ ಸಂತ್ರಸ್ತೆಯರು ಭೇಟಿ ಮಾಡಿರುವ ಬಗ್ಗೆ ತಮ್ಮ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.
ಈ ಮಧ್ಯೆ 196 ರಾಷ್ಟ್ರಗಳಲ್ಲಿ ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲಾಗಿದೆ. ಹೀಗಾಗಿ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಅಲ್ಲದೆ ಎಸ್ಐಟಿ ಮುಂದೆ ಹಾಜರಾಗಲು ಪ್ರಜ್ವಲ್ ರೇವಣ್ಣಗೆ ನೀಡಿದ ಕಾಲಾವಕಾಶ ಇಂದಿಗೆ ಮುಗಿಯಲಿದೆ. ಹೀಗಾಗಿ ಪ್ರಜ್ವಲ್ ಯಾವಾಗ ವಿಚಾರಣೆಗೆ ಹಾಜರಾಗ್ತಾರೆ ಎಂದು ಕಾದು ನೋಡಬೇಕಿದೆ.