ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಇದೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿದ್ದಾರೆ. ಇತ್ತ ಮಕ್ಕಳನ್ನು ಹೊರ ತರಲು ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಶತಪ್ರಯತ್ನ ಮಾಡುತ್ತಿದ್ದಾರೆ.
ಹೌದು ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಅತ್ಯಾಚಾರ ಪ್ರಕರಣ ಸೇರಿದಂತೆ ಒಟ್ಟು ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇತ್ತ ಸಹೋದರ ಸೂರಜ್ ರೇವಣ್ಣ ಕೂಡ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪರ್ಪನ ಅಗ್ರಹಾರ ಜೈಲಿನ ಕ್ವಾರಂಟೈನ್ ಬ್ಯಾರಿ ಕೆಡ್ನಲ್ಲಿ ಇದ್ದಾರೆ.
ಇತ್ತೀಚಿಗೆ ಅಂದರೆ ಕಳೆದ ಸೋಮವಾರ ಪ್ರಜ್ವಲ್ ನನ್ನು ಭೇಟಿಯಾಗಲು ತಾಯಿ ಭವಾನಿ ರೇವಣ್ಣ ಜೈಲಿಗೆ ಆಗಮಿಸಿದ್ದರು. ಇವಳೇ ಸುಮಾರು ಹೊತ್ತು ಮಗನ ಜೊತೆ ಚರ್ಚೆ ಮಾಡಿದರು. ಅದಾದ ಬಳಿಕ ಇಂದು ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರು ಕೂಡ ಪ್ರಜ್ವಲ್ ರೇವಣ್ಣನನ್ನು ಭೇಟಿ ಮಾಡಿ ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.ಅಲ್ಲದೆ ವಕೀಲರ ಜೊತೆಗೆ ಚರ್ಚೆ ನಡೆಸಿದ್ದು ಇಬ್ಬರು ಮಕ್ಕಳನ್ನು ಬಿಡುಗಡೆಗೊಳಿಸುವ ಕುರಿತು ಶತಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.