ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದು ಅಥವಾ ನಾಳೆ ಭಾರತಕ್ಕೆ ಆಗಮಿಸಬಹುದು ಎಂಬುದರ ಕುರಿತು ಮಾಹಿತಿ ಇದೆ ಎಂದು ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಮುಖಂಡರೇ ಮಾಧ್ಯಮಗಳಿಗೆ ಈ ಒಂದು ಮಾಹಿತಿಯನ್ನು ನೀಡಿದ್ದಾರೆ.ಈ ಪ್ರಕರಣದಲ್ಲಿ ರಾಜಕಾರಣವನ್ನು ನಾವು ಬೆರೆಸುತ್ತಿಲ್ಲ ಎಂದು ಬೆಂಗಳೂರಿನಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದರು.
ಇದರಲ್ಲಿ ನಮಗೆ ರಾಜಕೀಯ ಬೆರೆಸುವ ಅವಶ್ಯಕತೆ ಇಲ್ಲ ರಾಜಕೀಯ ಸಡ್ಯಂತರ ನಡೆಸುವ ಅವಶ್ಯಕತೆ ನಮಗೆ ಇಲ್ಲ ನಿನ್ನೆ ರೇವಣ್ಣ ನೋವಿನಿಂದ ಈ ಮಾತು ಹೇಳಿರಬಹುದು ಯಾರೇ ತಪ್ಪು ಮಾಡಿದರು ಕೂಡ ಅಂಥವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಚೆಲುವರಾಯ ಸ್ವಾಮಿ ತಿಳಿಸಿದರು.