ಸಿನಿಮಾ ಡೆಸ್ಕ್ : ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ನಟನೆಯ ‘ಪಠಾನ್’ ಚಿತ್ರ ಇದೀಗ ಭಾರೀ ವಿವಾದ ಸೃಷ್ಟಿಸಿದೆ. ಕೇಸರಿ ಬಣ್ಣದ ಬಿಕಿನಿ ತೊಟ್ಟು ವಿವಾದ ಸೃಷ್ಟಿಸಿದ ದೀಪಿಕಾ ಪಡುಕೋಣೆ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ಈ ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಹಿಂದೂ ಸಂಘಟನೆಗಳು ಕಿಡಿಕಾರಿದೆ.
ಇನ್ನೂ, ಇದೀಗ ಈ ವಿವಾದದ ಪರ ನಟ ಪ್ರಕಾಶ್ ರೈ ಬ್ಯಾಟಿಂಗ್ ಮಾಡಿದ್ದು, ದೀಪಿಕಾ ಪಡುಕೋಣೆ ಪರ ಮಾತನಾಡಿ ಸುದ್ದಿಯಾಗಿದ್ದಾರೆ. ಈ ಬಣ್ಣದ ಕುರುಡುತನವನ್ನು ಇನ್ನೆಷ್ಟು ದಿನ ಸಹಿಸಿಕೊಳ್ಳಬೇಕು ಎಂದು ಅವರು ಕಿಡಿಕಾರಿದ್ದಾರೆ. ಕೇಸರಿ ಬಣ್ಣ ಎನ್ನುವ ಕಾರಣಕ್ಕಾಗಿ ಪಠಾಣ್ ಚಿತ್ರತಂಡಕ್ಕೆ ಕೊಡುತ್ತಿರುವ ತೊಂದರೆಯು ಅಸಹ್ಯಕರವಾದದ್ದು ಎನ್ನುವ ರೀತಿಯಲ್ಲಿ ಅವರು ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಿನಿಮಾದ ಹೊಸ ಹಾಡು ‘ಬೇಷರಂ ರಂಗ್’ ವಿವಾದಕ್ಕೆ ಸಿಲುಕಿದ್ದು, ಕೇಸರಿ ಬಣ್ಣದ ಬಟ್ಟೆ ತೊಟ್ಟು ಹಾಟ್ ಆಗಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದು, ಇದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಪಠಾನ್ ಚಿತ್ರದ ನಿರ್ಮಾಪಕರಿಗೆ ಹಾಡಿನ ದೃಶ್ಯಗಳು ಮತ್ತು ವೇಷಭೂಷಣಗಳನ್ನು ಬದಲಾಯಿಸುವಂತೆ ಹೇಳಿದ್ದಾರೆ.
ವೇಷಭೂಷಣಗಳು ಹೆಚ್ಚು ಆಕ್ಷೇಪಾರ್ಹವಾಗಿದ್ದು, ಈ ಹಾಡುಗಳ ದೃಶ್ಯಗಳು ಮತ್ತು ವೇಷಭೂಷಣಗಳನ್ನು ಸರಿಪಡಿಸಬೇಕು. ಇಲ್ಲದಿದ್ದರೆ, ಮಧ್ಯಪ್ರದೇಶದಲ್ಲಿ ಚಿತ್ರ ಬಿಡುಗಡೆಗೆ ತಡೆ ಒಡ್ಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. #ಪಠಾಣ್ ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ ತುಕ್ಡೆ ತುಕ್ಡೆ ಗ್ಯಾಂಗ್ ಅನ್ನು ಬೆಂಬಲಿಸಿದ್ದಾರೆ, ವೇಷಭೂಷಣಗಳು ಹೆಚ್ಚು ಆಕ್ಷೇಪಾರ್ಹವಾಗಿದ್ದು, ಹಾಡನ್ನು ಕೊಳಕು ಮನಸ್ಥಿತಿಯೊಂದಿಗೆ ಚಿತ್ರೀಕರಿಸಲಾಗಿದೆ. ಹಾಡುಗಳ ದೃಶ್ಯಗಳು ಮತ್ತು ವೇಷಭೂಷಣಗಳನ್ನು ಸರಿಪಡಿಸಬೇಕು, ಇಲ್ಲದಿದ್ದರೆ ಮಧ್ಯಪ್ರದೇಶದಲ್ಲಿ ಚಿತ್ರಕ್ಕೆ ಅವಕಾಶ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ಯೋಚಿಸಬೇಕಾಗುತ್ತದೆ ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ಟ್ವೀಟ್ ಮಾಡಿದ್ದಾರೆ .
Disgusting … How long should we tolerate these ..Colour Blind #AndhBhakts .. #justasking https://t.co/SSgxKpvcE9
— Prakash Raj (@prakashraaj) December 14, 2022
Job Alert: ‘310 ಪ್ರಾಂಶುಪಾಲ’ರ ಹುದ್ದೆಗೆ ಅರ್ಜಿ ಆಹ್ವಾನ: ಇಲ್ಲಿದೆ ಸಂಪೂರ್ಣ ಮಾಹಿತಿ
2023 Election: ‘ಅಭಿವೃದ್ಧಿ ಆಧಾರ’ದಲ್ಲಿ ಚುನಾವಣೆ ಎದುರಿಸುತ್ತೇವೆ – BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ