ಹುಬ್ಬಳ್ಳಿ: ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದರ ಬಗ್ಗೆ ರಾಜ್ಯದಲ್ಲಿ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಈ ನಡುವೆಯೂ ಸಿದ್ಧಾರಮಯ್ಯ ಮಾಂಸಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದು ತಪ್ಪಲ್ಲ ಎಂಬುದಾಗಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಸಿದ್ಧರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.
ಈ ಕುರಿತಂತೆ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹಿಂದೂಗಳಲ್ಲಿ ಅನೇಕರ ದೇವರಿಗೂ ಮಾಂಸಾಹಾರ ಪ್ರಸಾದ ಮಾಡುತ್ತಾರೆ. ಸೇವಿಸಿಯೂ ದೇವಸ್ಥಾನಕ್ಕೆ ಹೋಗುತ್ತಾರೆ. ಅದೇ ರೀತಿ ಸಿದ್ಧರಾಮಯ್ಯ ಮಾಂಸಹಾರ ಸವಿಸಿ ದೇವಸ್ಥಾನಕ್ಕೆ ಹೋಗಿದ್ದರಲ್ಲಿ ತಪ್ಪೇನಿಲ್ಲ ಎಂದಿದ್ದಾರೆ.
ಸಿದ್ಧರಾಮಯ್ಯ ಮಾಂಸಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದು ಚರ್ಚೆಯ ವಿಷಯವೇ ಅಲ್ಲವಾಗಿದೆ. ಬಿಜೆಪಿಯವರಿಗೆ ಬೇರೆ ವಿಷಯ ಚರ್ಚೆ ಮಾಡೋದಕ್ಕೆ ಇಲ್ಲ. ಅದಕ್ಕೆ ಹೀಗೆ ಸಿದ್ಧರಾಮಯ್ಯ ಮಾಂಸಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದನ್ನು ಚರ್ಚಿಸುತ್ತಿದ್ದಾರೆ ಎಂದರು.