ಧಾರವಾಡ: ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ರೆಡಿಯಾಗಿದ್ದಾರೆ. ವಿಧಾನಸಭೆ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದು ಖಚಿತ. ಬಿಜೆಪಿಯವರು ಟಿಕೆಟ್‌ ಕೊಡಲು ಬಂದರೂ ನಾನು ಪಡೆದುಕೊಳ್ಳುವುದಿಲ್ಲ. ನಾನು ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇವೆ ಎಂದಿದ್ದಾರೆ.

BREAKING NEWS: 4ನೇ ಆರೋಪಿ ಮಠದ ಕಾರ್ಯದರ್ಶಿ ಪರಮಶಿವಯ್ಯಗೆ ಮೆಡಿಕಲ್‌ ಟೆಸ್ಟ್;‌ ಕೆಲವೇ ಹೊತ್ತಿನಲ್ಲಿ ಕೋರ್ಟ್‌ ಗೆ ಹಾಜರು

 

ನಗರದಲ್ಲಿ ಮಾತನಾಡಿದ ಅವರು, ರಾಜ್ಯದ ಏಳೆಂಟು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಕ್ಕಾಗಿ ಹಿಂದೂ ಕಾರ್ಯಕರ್ತರು ಮನವಿ ಮಾಡಿದ್ದು, ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂಬುದನ್ನು ಶೀಘ್ರವೇ ಬಹಿರಂಗಪಡಿಸುವುದಾಗಿ ತಿಳಿಸಿದ್ದಾರೆ.ಬೆಳಗಾವಿ ನಗರದ ಎರಡೂ ಕ್ಷೇತ್ರ, ತೇರದಾಳ, ಜಮಖಂಡಿ, ಕಾರ್ಕಳ, ಉಡುಪಿ, ಶೃಂಗೇರಿ, ಪುತ್ತೂರಿನಿಂದ ಸ್ಪರ್ಧೆ ಮಾಡುವುದಕ್ಕಾಗಿ ಕಾರ್ಯಕರ್ತರು ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಕೊಂಡಿರುವವರು ಒತ್ತಡ ಹಾಕುತ್ತಿದ್ದಾರೆ.

BREAKING NEWS: 4ನೇ ಆರೋಪಿ ಮಠದ ಕಾರ್ಯದರ್ಶಿ ಪರಮಶಿವಯ್ಯಗೆ ಮೆಡಿಕಲ್‌ ಟೆಸ್ಟ್;‌ ಕೆಲವೇ ಹೊತ್ತಿನಲ್ಲಿ ಕೋರ್ಟ್‌ ಗೆ ಹಾಜರು

 

ಹೀಗಾಗಿ ಬರುವ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದು ಖಚಿತ. ಯಾವ ಕ್ಷೇತ್ರ ಎನ್ನುವುದನ್ನು ಶೀಘ್ರ ಬಹಿರಂಗಪಡಿಸುತ್ತೇವೆ. ಬಿಜೆಪಿಯಿಂದ ನನಗೆ ಯಾವುದೇ ಸಕಾರಾತ್ಮಕ ಸ್ಪಂದನೆ ದೊರೆಯಲಿಲ್ಲ. ಇನ್ನು ಮೇಲೆ ಬಿಜೆಪಿಯವರು ಟಿಕೆಟ್ ಕೊಡಲು ಬಂದರೂ ನಾನು ಪಡೆದುಕೊಳ್ಳುವುದಿಲ್ಲ. ಸ್ವತಂತ್ರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

Share.
Exit mobile version