ಮೈಸೂರು: ಕರ್ನಾಟಕದಲ್ಲಿ ಲವ್ ಜಿಹಾದ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಹೀಗಾಗಿ ಇವುಗಳನ್ನು ತಡೆಯುವ ನಿಟ್ಟಿನಲ್ಲಿ ಮಹತ್ವದ ಕ್ರಮವಾಗಿ ಲವ್ ಜಿಹಾದ್ ( Love Jihad ) ತಡೆಗಾಗಿ ಕರ್ನಾಟಕದಲ್ಲಿ ವಿಶೇಷ ಪ್ರತ್ಯೇಕ ಕಾಯ್ದೆಯನ್ನು ರೂಪಿಸಬೇಕು ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು, ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಒತ್ತಾಯಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಲವ್ ಜಿಹಾದ್ ಗೆ ಪ್ರತ್ಯೇಕ ಕಾಯ್ದೆ ರೂಪಿಸಬೇಕು. ಈ ಬಗ್ಗೆ ಸಿಎಂ ಬೊಮ್ಮಾಯಿ ಅವರಲ್ಲಿ ವಿಶೇಷವಾಗಿ ಮನವಿ ಮಾಡುತ್ತೇನೆ ಎಂದರು.
ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಲವ್ ಜಿಹಾದ್ ವಿರುದ್ಧ ಮೊದಲು ಧ್ವನಿ ಎತ್ತಿದವನೇ ನಾನು ಆಗಿದ್ದೇನೆ. ಈ ಮೂಲಕ ಮೂರು ಸಾವಿರ ಹೆಣ್ಣು ಮಕ್ಕಳನ್ನು ನಾವು ಪಾರು ಮಾಡಿದ್ದೇವೆ ಎಂದು ಹೇಳಿದರು.
ಹಿಂದೂ ಹೆಣ್ಣಮುಕ್ಕಳು ಪ್ರೀತಿ ಮಾಡುವಾಗ ವ್ಯತ್ಯಾಸ ಅರಿಯಲಿ. ಇಲ್ಲವಾದರೇ ದೆಹಲಿಯಲ್ಲಿನ ಶ್ರದ್ಧಾ ಹಾಗೆ ತುಂಡು ತುಂಡು ಬಲಿಯಾಗಬೇಕಾಗುತ್ತದೆ ಎಂಬುದಾಗಿ ಇದೇ ಸಂದರ್ಭದಲ್ಲಿ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಸಿದರು.