ಕಲಬುರ್ಗಿ : ಡಿಸಿಎಂ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಕಲಬುರ್ಗಿಯಲ್ಲಿ ಪ್ರಣಮಾನಂದ ಸ್ವಾಮೀಜಿ ಹೇಳಿಕೆ ನೀಡಿದರು. ಸಂಕ್ರಾಂತಿ, ಯುಗಾದಿ ಆಗಲಿ ಐದು ರಾಜ್ಯ ಚುನಾವಣೆ ಆಗಲಿ ಎಂದಿದ್ದರು. ಅದೆಲ್ಲ ಮುಗಿದು ಹೋಗಿದೆ. ಈಗಲಾದರೂ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಿ ಎಂದು ಪ್ರಣವಾನಂದ ಸ್ವಾಮೀಜಿ ಹೇಳಿಕೆ ನೀಡಿದರು.
ಕಲ್ಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಡಿಸಿಎಂ ಡಿಕೆ ಶಿವಕುಮಾರ್ ಪರವಾಗಿ ಅತಿ ಹಿಂದುಳಿದ ವರ್ಗದ ಮಠಾಧೀಶರು ಇದ್ದಾರೆ. ಸಿಎಂ ಸಿದ್ದರಾಮಯ್ಯ 8 ವರ್ಷ ಮುಖ್ಯಮಂತ್ರಿ ಆಗಿ ಅಧಿಕಾರ ಅನುಭವಿಸಿದ್ದಾರೆ. ಹಿಂದುಳಿದ ವರ್ಗಗಳಿಗೆ ಸಿದ್ದರಾಮಯ್ಯ ಯಾವ ಕೊಡುಗೆಯೂ ನೀಡಿಲ್ಲ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಒತ್ತಾಯಿಸುತ್ತೇನೆ. ನಾಳೆ ನಾವು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡುತ್ತೇವೆ ಎಂದು ಕಲಬುರ್ಗಿಯಲ್ಲಿ ಪ್ರಣವಾನಂದ ಸ್ವಾಮೀಜಿ ಹೇಳಿಕೆ ನೀಡಿದರು.








