ಮಂಗಳೂರು: ನಿನ್ನೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವಂತ ಶಫಿಕ್ ಸಹೋದರ ಸಫ್ರಿದ್ ಹಿಂದೂ ಕಾರ್ಯಕರ್ತರಿಗೆ ಜೀವ ಬೆದರಿಕೆ ಹಾಕಿದ್ದಾರೆ. ಬಂಧಿಸುವಂತೆ ಬೆಳ್ಳಾರೆ ಠಾಣೆಯ ಮುಂದೆ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಒತ್ತಾಯಿಸಿದ್ದರು. ಈ ಬೆನ್ನಲ್ಲೇ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಯ ಸಹೋದರ ಸಫ್ರಿದ್ ನನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
BIG NEWS: ‘ಹುತಾತ್ಮ ಅರಣ್ಯ ಸಿಬ್ಬಂದಿ’ಗಳ ಪರಿಹಾರದ ಮೊತ್ತ 30 ರಿಂದ 50 ಲಕ್ಷಕ್ಕೆ ಹೆಚ್ಚಳ – ಸಿಎಂ ಬೊಮ್ಮಾಯಿ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಕಳೆದ ಜುಲೈ.26ರಂದು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ( Praveen Nettaru Murder Case ) ಹತ್ಯೆಗೈಯಲ್ಲಾಗಿತ್ತು. ಈ ಸಂಬಂಧ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣ ಸಂಬಂಧ ಪ್ರವೀಣ್ ಹತ್ಯಾ ಆರೋಪಿಯ ಸಹೋದರ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿರೋದಾಗಿ ತಿಳಿದು ಬಂದಿದೆ. ಈ ಕಾರಣದಿಂದಲೇ ಬೆಳ್ಳಾರೆಯ ಠಾಣೆ ಮುಂದೆ ಹಿಂದೂ ಕಾರ್ಯಕರ್ತರು ಬೆದರಿಕೆ ಹಾಕಿದಂತ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿ ನಿನ್ನೆ ರಾತ್ರಿ ಪ್ರತಿಭಟನೆ ನಡೆಸಲಾಯಿತು.
ಕರ್ತವ್ಯ ನಿಷ್ಠೆ ಮೆರೆದ ಪೊಲೀಸ್: ಕಳೆದುಕೊಂಡ ‘ದುಬಾರಿ ಮೊಬೈಲ್’ ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿ ವಾಪಾಸ್.!
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದ್ದಂತ ಪ್ರವೀಣ್ ನೆಟ್ಟಾರು ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಶಫಿಕ್ ಬಂಧಿಸಲಾಗಿತ್ತು. ಈತನ ಸಹೋದರ ಸಫ್ರಿದ್ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ್ದಾನೆ ಎಂಬುದಾಗಿ ಆರೋಪಿಸಲಾಗಿತ್ತು.
SHOCKING NEWS: ದುಬೈನಿಂದ ಕೊಚ್ಚಿಗೆ ಹೊರಟಿದ್ದ ವಿಮಾನದಲ್ಲಿ ಪ್ರಜ್ಞಾಹೀನಳಾಗಿ ಬಿದ್ದ ಮಹಿಳೆ ಸಾವು
ಆರೋಪಿ ಶಫಿಕ್ ಸಹೋದರ ಸಫ್ರಿದ್ ಹಿಂದೂ ಕಾರ್ಯಕ್ರತ ಪ್ರಶಾಂತ್ ರೈ ಎಂಬುವರಿಗೆ ಕರೆ ಮಾಡಿ, ಜೀವ ಬೆದರಿಕೆ ಹಾಕಲಾಗಿದೆ ಎಂಬುದಾಗಿ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಅಲ್ಲದೇ ಇಂದು ಸಫ್ರಿದ್ ಬಂಧಿಸುವಂತೆ ಆಗ್ರಹಿಸಿ, ಬೆಳ್ಳಾರೆ ಠಾಣೆಯ ಮುಂದೆ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನಲೆಯಲ್ಲಿ ಇಂದು ಪೊಲೀಸರು ಜೀವ ಬೆದರಿಕೆ ಹಾಕಿದಂತ ಆರೋಪಿ ಸಫ್ರಿದ್ ನನ್ನು ಬಂಧಿಸಿದ್ದಾರೆ.