ಬೆಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣದ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಹತ್ಯೆ ಆರೋಪಿಗಳನ್ನು ಕಠಿಣ ರೀತಿಯಲ್ಲಿ ಶಿಕ್ಷೆ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರೆ ಅವರ ಮೇಲೆ ದುಷ್ಕರ್ಮಿಗಳು ನಡೆಸಿದ ದಾಳಿಯಿಂದ ನಮ್ಮ ಕಾರ್ಯಕರ್ತ ನಿಧನರಾಗಿದ್ದು, ಕೃತ್ಯ ಎಸಗಿದವರನ್ನು ಯಾವುದೇ ಮುಲಾಜಿಲ್ಲದೆ ಬಂಧಿಸಿ ಎಲ್ಲರಿಗೂ ಪಾಠವಾಗುವಂತೆ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಮೃತ ಯುವಕನ ಆತ್ಮಕ್ಕೆ ಶಾಂತಿ ಕೋರುತ್ತಾ ಅವರ ಕುಟುಂಬಕ್ಕೆ ದುಃಖ ನೀಗಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರುನನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಹಿಂದೆ ಮತಾಂಧ ಶಕ್ತಿಗಳ ಕೈವಾಡ ಇದೆ : ಗೃಹ ಸಚಿವ ಅರಗಜ್ಞಾನೇಂದ್ರ