ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ಹತ್ಯೆಯಿಂದಾಗಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಪ್ರತಿಭಟನೆಯ ವೇಳೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಾರಣ, ಲಾಠಿಚಾರ್ಜ್ ಕೂಡ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಮಹತ್ವದ ಸಭೆಯನ್ನು ತುರ್ತಾಗಿ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಕರೆದಿದ್ದಾರೆ.
ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಸರಕಾರ ಮೈಮರೆತಿದ್ದು ಯಾಕೆ? – ಹೆಚ್.ಡಿ ಕುಮಾರಸ್ವಾಮಿ ಕಿಡಿ
ಶಿವಮೊಗ್ಗದಲ್ಲಿ ಹರ್ಷ ಹತ್ಯೆಯ ಬಳಿಕ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಇಂದು ಪ್ರವೀಣ್ ನೆಟ್ಟಾರ್ ಹತ್ಯೆಯಾಗಿದೆ. ಈ ಹಿನ್ನಲೆಯಲ್ಲಿ ಹಿಂದೂ ಕಾರ್ಯಕರ್ತರು ಬೆಳ್ಳಾರೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಆರೋಪಿಗಳನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಇದೀಗ ಬೆಳ್ಳಾರೆ ಬೂದಿ ಮುಚ್ಚಿದಂತ ಕೆಂಡವಾಗಿದ್ದು, ಉದ್ವಿಗ್ನ ವಾತಾವಣ ಸ್ಥಳದಲ್ಲಿ ನಿರ್ಮಾಣವಾಗಿದೆ.
ಈ ಹಿನ್ನಲೆಯಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಹತ್ವದ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಪೊಲೀಸ್ ಇಲಾಖೆಯ ವರಿಷ್ಠರು ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
ಇಂದಿನ ತುರ್ತು ಸಭೆಯಲ್ಲಿ ರಾಜ್ಯದಲ್ಲಿ ನಡೆಯುತ್ತಿರುವಂತ ಹಿಂದೂ ಕಾರ್ಯಕರ್ತರ ಹತ್ಯೆಯ ನಿಯಂತ್ರಣ ಕ್ರಮಗಳು, ಮುಂದೆ ಹೀಗೆ ಆಗದಂತೆ ವಹಿಸಬಹುದಾದಂತ ಎಚ್ಚರಿಕೆ ಸೇರಿದಂತೆ ಹಲವು ಮಹತ್ವದ ವಿಚಾರಣಗಳನ್ನು ಚರ್ಚಿಸಲಾಗುತ್ತದೆ.