ಚಿತ್ರದುರ್ಗ: ಆಸ್ಪತ್ರೆಯಲ್ಲೇ ಆಪರೇಷನ್ ಮಾಡೋ ತರ ಪ್ರೀ ವೆಡ್ಡಿಂಗ್ ಶೂಟಿಂಗ್ ಮಾಡಿ, ಕರ್ತವ್ಯ ಲೋಪ ಎಸಗಿದ್ದಂತ ವೈದ್ಯ ಡಾ.ಅಭಿಷೇಕ್ ಅವರನ್ನು ಕೆಲಸದಿಂದ ವಜಾಗೊಳಿಸಿ, ಜಿಲ್ಲಾಧಿಕಾರಿ ವೆಂಕಟೇಶ್ ಆದೇಶಿಸಿದ್ದಾರೆ.
ಚಿತ್ರದುರ್ಗದ (Chitradurga) ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿ ಎಡವಟ್ಟು ಮಾಡಿಕೊಂಡ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಈ ಘಟನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿ ಬಂದಿತ್ತು.
ಭರಮಸಾಗರ ಮೂಲದ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ , ರೋಗಿಯೊಬ್ಬರನ್ನು ಬೆಡ್ ಮೇಲೆ ಮಲಗಿಸಿ, ಆಪರೇಷನ್ ಮಾಡುವಂತೆ, ಇನ್ನೊಂದೆಡೆ ಭಾವಿ ಪತ್ನಿ ಅಭಿಷೇಕ್‌ಗೆ ಸಹಾಯ ಮಾಡುವಂತೆ ಚಿತ್ರೀಕರಿಸಿದ್ದರು.
ಅಂತಿಮವಾಗಿ ಆಪರೇಷನ್ ಮುಗಿಯಿತು ಅಂದ ಬಳಿಕ ರೋಗಿ ಎದ್ದು ಕುಳಿತುಕೊಳ್ಳುವ ವಿಡಿಯೋ ವೈರಲ್ ಆಗಿತ್ತು. ಈ ವೀಡಿಯೋ ವೈರಲ್ ಆಗುತ್ತಿದ್ದಂತೇ, ಗುತ್ತಿಗೆ ವೈದ್ಯರ ಪ್ರೀ ವೆಡ್ಡಿಂಗ್ ಶೂಟಿಂಗ್ ಬಗ್ಗೆ ವೈದ್ಯರೇ ಹೀಗೆ ಮಾಡಿದ್ದು ಸರಿಯಲ್ಲ ಎಂಬುದಾಗಿ ಆಕ್ಷೇಪ, ಆಕ್ರೋಶ ಹೊರಬಿದ್ದಿತ್ತು. ಈ ಬೆನ್ನಲ್ಲೇ ಅವರನ್ನು ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್ ಕೆಲಸದಿಂದ ವಜಾಗೊಳಿಸಿ ಆದೇಶಿಸಿದ್ದಾರೆ.
Factchek: ‘BBMP’ ವತಿಯಿಂದ ‘ಪೌರಕಾರ್ಮಿಕ’ರಿಗೆ ‘ನಿವೇಶ’ ನೀಡಲಾಗುತ್ತಿದ್ಯಾ? ಇಲ್ಲಿದೆ ‘ಸತ್ಯಾಸತ್ಯತೆ’
“ನಿಮಗೊಂದು ಶಿಕ್ಷೆ ನೀಡ್ತೀನಿ” : ಕ್ಯಾಂಟೀನ್’ನಲ್ಲಿ ವಿವಿಧ ಪಕ್ಷಗಳ ‘8 ಸಂಸದ’ರೊಂದಿಗೆ ‘ಪ್ರಧಾನಿ ಮೋದಿ’ ಭೋಜನಕೂಟ