ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಮನ್ ಕೀ ಬಾತ್ ಮಾತನಾಡಿದ್ದಾರೆ. 96 ನೇ ಮೋದಿ ಮನ್ ಕೀ ಬಾತ್ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ದೇಶದ ಜನತೆಗೆ ಕ್ರಿಸ್ ಮಸ್ ಹಬ್ಬ ಪ್ರಧಾನಿ ಮೋದಿ ಮನ್ ಕೀ ಬಾತ್ ನಲ್ಲಿ ಮಾತನಾಡಿ, ಶುಭಾಷಯ ಕೋರಿದ್ದಾರೆ.
BIGG NEWS: 2022ನೇ ವರ್ಷ ಹಲವು ಸಾಧನೆಗಳಿಗೆ ಭಾರತ ಸಾಕ್ಷಿಯಾಗಿದೆ; ಮನ್ ಕೀ ಬಾತ್ನಲ್ಲಿ ಪ್ರಧಾನಿ ಮೋದಿ ಮಾತು
ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಹಾಗಾಗಿ ಜನರು ಕೋವಿಡ್ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.
ನಾವೆಲ್ಲರೂ ಮಾಸ್ಕ್ ಧರಿಸಿಕೊಂಡು ಮುನ್ನೆಚ್ಚರಿಕೆ ವಹಿಸಬೇಕು. ವಿಶ್ವದ ಹಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದೆ. ಸ್ವಚ್ಛತೆ, ಆರೋಗ್ಯದ ಬಗ್ಗೆ ಎಲ್ಲರೂ ಕಾಳಜಿ ವಹಿಸಬೇಕು ಎಂದು ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.
ಇನ್ನು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನದಂದು ಅವರನ್ನು ಸ್ಮರಿಸಿದರು. “ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ಅವರಿಗೆ ವಿಶೇಷ ಸ್ಥಾನವಿದೆ” ಎಂದು ಹೇಳಿದ್ದಾರೆ.
2022ನೇ ವರ್ಷ ಹಲವು ಸಾಧನೆಗಳಿಗೆ ಭಾರತ ಸಾಕ್ಷಿಯಾಗಿದೆ. ಬಾಹ್ಯಾಕಾಶ ಕ್ಷೇತ್ರ , ಕ್ರೀಡೆ ಸೇರಿದಂತೆ ಹಲವು ಕೇತ್ರಗಳಲ್ಲಿ ಸಾಧನೆ ಮಾಡಿದೆ. ಅನೇಕ ಭಾರತೀಯ ಕ್ರೀಡಾಪಟುಗಳು ಪದಕಗಳನ್ನು ಗೆದ್ದು ಸಾಧನೆ ಮಾಡಿದ್ದಾರೆ ಎಂದು ಹೇಳಿದ್ದಾರೆ.