ಪೋರ್ಚುಗಲ್: ಆಸ್ಪತ್ರೆಯೊಂದರಲ್ಲಿ ಹಾಸಿಗೆ ಲಭ್ಯವಿಲ್ಲದ ಕಾರಣ ಒಂದು ಆಸ್ಪತ್ರೆಯಿಂದ ಇನ್ನೊಂದಕ್ಕೆ ಸ್ಥಳಾಂತರಿಸುವಾಗ ಹೃದಯ ಸ್ತಂಭನಕ್ಕೆ ಒಳಗಾಗಿ
34 ವರ್ಷದ ಭಾರತೀಯ ಗರ್ಭಿಣಿ ಪ್ರವಾಸಿ ಮಹಿಳೆ ಲಿಸ್ಬನ್ನಲ್ಲಿ ಸಾವನ್ನಪ್ಪಿದ್ದಾರೆ. ಈ ಸುದ್ದಿ ಮಾಧ್ಯಮಗಳಲ್ಲಿ ವರದಿಯಾದ ಕೆಲವೇ ಗಂಟೆಗಳಲ್ಲಿ ಪೋರ್ಚುಗಲ್ನ ಆರೋಗ್ಯ ಸಚಿವೆ ಮಾರ್ಟಾ ಟೆಮಿಡೊ ಮಂಗಳವಾರ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.
ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಮತ್ತು ಆರೋಗ್ಯ ಸೇವೆಯು ಸಮಯಕ್ಕೆ ಸರಿಯಾಗಿ ಸ್ಪಂದಿಸದ ಕಾರಣ ಈ ಘಟನೆ ನಡೆದಿದ್ದು, ಇದೀಗ ಗರ್ಭಿಣಿ ಮಹಿಳೆಯರನ್ನು ಆಸ್ಪತ್ರೆಗಳಲ್ಲಿ ಅಪಾಯಕಾರಿ ಸ್ಥಿತಿಯನ್ನು ಎದುರಿಸುವಂತೆ ಮಾಡಿದ್ದಕ್ಕಾಗಿ ಗರ್ಭಿಣಿಯರ ತುರ್ತು ಆರೈಕೆ ಸೇವೆಗಳನ್ನು ಮುಚ್ಚುವ ಬಗ್ಗೆ ತೀವ್ರ ಟೀಕೆಗೆ ಒಳಗಾದ
ನಂತರ ಟೆಮಿಡೋ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.
ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಭಾರತೀಯ ಮಹಿಳೆ 31 ವಾರಗಳ ಗರ್ಭಿಣಿಯಾಗಿದ್ದು, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಈ ವೇಳೆ ಅವರನ್ನು ಪೋರ್ಚುಗಲ್ನ ಅತಿದೊಡ್ಡ ಆಸ್ಪತ್ರೆ ಸಾಂತಾ ಮಾರಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದ್ರೆ, ಅಲ್ಲಿ ಸ್ಥಳಾವಕಾಶವಿರಲಿಲ್ಲ. ಹೀಗಾಗಿ ತಕ್ಷಣವೇ ಸಾವೊ ಫ್ರಾನ್ಸಿಸ್ಕೊ ಕ್ಸೇವಿಯರ್ ಆಸ್ಪತ್ರೆಗೆ ವರ್ಗಾಯಿಸಿತು. ಆದ್ರೆ, ಮಾರ್ಗಮಧ್ಯೆ ಆಕೆ ಹೃದಯ ಸ್ತಂಭನದಿಂದ ಕೊನೆಯುಸಿರೆಳೆದಿದ್ದಾಳೆ ಎಂದು ವರದಿಗಳು ತಿಳಿಸಿವೆ.
ಕೇಂದ್ರ ಸಚಿವ ಪಿಯೂಷ್ ಗೋಯಲ್ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ: ʻಗಣೇಶ ಮೂರ್ತಿʼಗೆ ಆರತಿ ಬೆಳಗಿದ ನಮೋ… Watch Video