ಉತ್ತರಪ್ರದೇಶ : ಮೂರು ತಿಂಗಳ ಹಿಂದೆ ಅತ್ಯಾಚಾರಕ್ಕೊಳಗಾದ ಗರ್ಭಿಣಿ ಬಾಲಕಿಯನ್ನು ಬೆಂಕಿ ಹಚ್ಚಿ ಸಜೀವ ದಹನ ಮಾಡಿರುವ ಘಟನೆ ಉತ್ತರ ಪ್ರದೇಶದ ಮೈನ್ಪುರಿ ಜಿಲ್ಲೆಯಲ್ಲಿ ಕುರವಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಮೂವರ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಅವರನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ.
BIGG NEWS : ನಿಷೇಧಿತ `PFI’ ಸಂಘಟನೆಯ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗ!
ಮೂರು ತಿಂಗಳ ಹಿಂದೆ ಅದೇ ಗ್ರಾಮದಲ್ಲಿ ವಾಸಿಸುವ ಅಭಿಷೇಕ್ ಎಂಬಾತ ತನ್ನ ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಬಾಲಕಿಯ ತಾಯಿ ಆರೋಪಿಸಿದ್ದಾಳೆ.ಆದರೆ ಸಂತ್ರಸ್ತೆ ತನ್ನ ಕುಟುಂಬಕ್ಕೆ ತನಗಾಗಿರುವ ಸಂಕಟವನ್ನು ಬಹಿರಂಗಪಡಿಸಲಿಲ್ಲ.
ನಂತರ ತೀವ್ರ ಹೊಟ್ಟೆನೋವು ಎಂದು ಬಾಲಕಿ ದೂರಿದ್ದು, ಆಕೆ ಗರ್ಭಿಣಿ ಎಂಬುದು ತಿಳಿದು ಬಂದಿದೆ. ಕೂಡಲೇ ಪಂಚಾಯತಿ ಕರೆದು ಸಭೆಯಲ್ಲಿ ಬಾಲಕಿ ಹಾಗೂ ಆರೋಪಿ ವಿವಾಹವಾಗಲು ತೀರ್ಮಾನಿಸಲಾಗಿತ್ತು.ಇದಾದ ನಂತರ ಆರೋಪಿಯ ತಾಯಿ ಸಂತ್ರಸ್ತೆಯನ್ನು ತಮ್ಮ ಮನೆಗೆ ಕರೆದೊಯ್ದು ಆಕೆಯ ಮೇಲೆ ಪೆಟ್ರೋಲ್ ಎರಚಿ, ಗರ್ಭಿಣಿಯನ್ನು ಹತ್ಯೆ ಮಾಡಲು ಯತ್ನಿಸಿದ್ದಾರೆ ಎಂದು ಬಾಲಕಿಯ ಮನೆಯವರು ಆರೋಪಿಸಿದ್ದಾರೆ.
ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಸಂತ್ರಸ್ತೆಯನ್ನು ಮೈನ್ಪುರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಸಾವನ್ನಪ್ಪಿದ್ದಾಳೆ. ಸಂತ್ರಸ್ತೆಯ ತಾಯಿಯ ದೂರಿನ ಆಧಾರದ ಮೇಲೆ ಪೊಲೀಸರು ಪೋಕ್ಸೋ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದ್ದು, ಶೀಘ್ರವೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
BIGG NEWS : ನಿಷೇಧಿತ `PFI’ ಸಂಘಟನೆಯ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗ!