ಬೆಂಗಳೂರು: ಮಾರ್ಚ್ 2026ರಿಂದ ರಾಜ್ಯದಲ್ಲಿನ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ಮಾಡಲಾಗುತ್ತದೆ ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ರಾಜ್ಯದ ಎಲ್ಲ ಗರ್ಭಿಣಿಯರಿಗೂ 2026ರ ಮಾರ್ಚ್‌ನಿಂದ ಜಿಲ್ಲಾವಾರು ಸಾಮೂಹಿಕ ಸೀಮಂತ ಮಾಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಲಿದೆ. ಗರ್ಭಿಣಿ ಆರೋಗ್ಯವಂತರಾಗಿದ್ದರೆ ಆರೋಗ್ಯವಂತ ಮಕ್ಕಳು ಜನಿಸುತ್ತವೆ. ಆಗ ಆರೋಗ್ಯವಂತ ದೇಶ ನಿರ್ಮಾಣವಾಗುತ್ತದೆ. ಸಾಮೂಹಿಕ ಸೀಮಂತದಂತಹ ಕಾರ್ಯಕ್ರಮಗಳ ಮೂಲಕ ಗರ್ಭಿಣಿಯರು ಹಾಗೂ ಅವರ ಕಂದಮ್ಮಗಳ ಆರೋಗ್ಯದ ಬಗ್ಗೆಯೂ ಸರ್ಕಾರ ಕಾಳಜಿ ತೋರಲು ಮುಂದಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ಎಲ್ಲ ಗರ್ಭಿಣಿಯರಿಗೂ 2026ರ ಮಾರ್ಚ್‌ನಿಂದ ಜಿಲ್ಲಾವಾರು ಸಾಮೂಹಿಕ ಸೀಮಂತ ಮಾಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಲಿದೆ. ಗರ್ಭಿಣಿ ಆರೋಗ್ಯವಂತರಾಗಿದ್ದರೆ ಆರೋಗ್ಯವಂತ ಮಕ್ಕಳು ಜನಿಸುತ್ತವೆ. ಆಗ ಆರೋಗ್ಯವಂತ ದೇಶ ನಿರ್ಮಾಣವಾಗುತ್ತದೆ. ಸಾಮೂಹಿಕ ಸೀಮಂತದಂತಹ ಕಾರ್ಯಕ್ರಮಗಳ ಮೂಲಕ ಗರ್ಭಿಣಿಯರು ಹಾಗೂ ಅವರ ಕಂದಮ್ಮಗಳ ಆರೋಗ್ಯದ ಬಗ್ಗೆಯೂ… pic.twitter.com/dQTTv1NsCQ
— DIPR Karnataka (@KarnatakaVarthe) March 25, 2025
ಗರ್ಭಿಣಿಯರಿಗೆ ಸೀಮಂತ ಮಾಡುವುದೆಂದರೆ ಅದು ನಮ್ಮ ಭಾರತೀಯ ಸಂಸ್ಕೃತಿಯ ಭಾಗವಾಗಿದೆ. ಭಾರತೀಯ ಸಂಸ್ಕೃತಿ ಮಹಿಳೆಗೆ ಅತ್ಯಂತ ಉನ್ನತ ಸ್ಥಾನವನ್ನು ಕೊಟ್ಟಿದೆ ಎಂದರು.
ಮಾತೃತ್ವ ಎನ್ನುವುದು ಅತ್ಯಂತ ಶ್ರೇಷ್ಟವಾದ ಮೌಲ್ಯ. ಹಿಂದಿನಿಂದಲೂ ಮಾತೃದೇವೋಭವ ಎನ್ನುತ್ತೇವೆ, ಜನನಿ ತಾನೆ ಮೊದಲ ಗುರುವು ಎನ್ನುತ್ತೇವೆ. ಅದು ಸೀಮಂತ ದಿಂದ ಆರಂಭವಾಗಿ ಮಗು ಬೆಳವಣಿಗೆ ಹೊಂದಿದಂತೆ ಮುಂದುವರಿಯುತ್ತ ಹೋಗುತ್ತದೆ. ಒಂದು ಮಗುವಿನ ಬೆಳವಣಿಗೆ ಎಂದರೆ ಅದು ಸಮಾಜದ ಬೆಳವಣಿಗೆ, ದೇಶದ ಬೆಳವಣಿಗೆ, ಮಗುವನ್ನು ಸಮಾಜದ ಆಸ್ತಿಯಾಗಿ ಬೆಳೆಸಲು ಈ ಸಂಸ್ಕಾರಗಳು ಅತ್ಯಂತ ಅಗತ್ಯ. ಮಗು ನಾಳೆಯ ಉತ್ತಮ ಪ್ರಜೆಯಾಗಬೇಕು, ಸಮಾಜಕ್ಕೆ ಆಸ್ತಿಯಾಗಬೇಕು ಎಂದು ಸಚಿವರು ಕರೆ ನೀಡಿದರು.
BIG NEWS: ಎಲ್ಲಾ ಪಕ್ಷದವರಿಗೂ ಹನಿಟ್ರ್ಯಾಪ್ ಆಗಿದೆ, ಕೆಲವರು ಸ್ಟೇ ತಂದಿದ್ದಾರೆ: ಸಚಿವ ಕೆಎನ್ ರಾಜಣ್ಣ ಹೊಸ ಬಾಂಬ್