ಶಿವಮೊಗ್ಗ : ವೀರ ಸಾವರ್ಕರ್ ಫ್ಲೆಕ್ಸ್ ತೆರವು ವಿಚಾರದಲ್ಲಿ ಉಂಟಾದ ಗಲಾಭೆಯಲ್ಲಿ ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೆ ಒಳಗಾದ ಪ್ರೇಮ್ ಸಿಂಗ್ ಅವರ ಆರೋಗ್ಯವನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರು ವಿಚಾರಿಸಿದರು.
ಇಂದು ಮುಂಜಾನೆ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಅವರು ಚಿಕಿತ್ಸೆ ಪಡೆಯುತ್ತಿರುವ ಪ್ರೇಮ್ ಸಿಂಗ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಆನಂತರ ಸಿಮ್ಸ್ ಮುಖ್ಯಸ್ಥ ಡಾ ಶ್ರೀಧರ್ ಹಾಗೂ ಇತರ ವೈದ್ಯರಿಂದ ಪ್ರೇಮ್ಸಿಂಗ್ ಅವರ ಆರೋಗ್ಯದ ಕುರಿತಾಗಿ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಶಾಸಕ ಕೆ.ಎಸ್ ಈಶ್ವರಪ್ಪ, ಸಂಸದ ಬಿ.ವೈ ರಾಘವೇಂದ್ರ, ಕೆ.ಈ ಕಾಂತೇಶ್, ಪ್ರಮುಖರಾದ ಎಸ್ ದತ್ತಾತ್ರೀ. ಬಿಎಸ್ ಚನ್ನಬಸಪ್ಪ ಸೇರಿದಂತೆ ಹಲವರು ಇದ್ದರು