ಬೆಂಗಳೂರು : ವಿಧಾನಸಭೆಯ ಅಧಿವೇಶನದಲ್ಲಿ ಇಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು 2025ನೇ ಸಾಲಿನ ಕರ್ನಾಟಕ ಜನಸಂದಣಿ ನಿಯಂತ್ರಣ (ಕಾರ್ಯಕ್ರಮಗಳು ಮತ್ತು ಗುಂಪುಗೂಡುವ ಸ್ಥಳಗಳಲ್ಲಿ ಜನಸಂದಣಿಯ ನಿರ್ವಹಣೆ) ವಿಧೇಯಕ,2025ನೇ ಸಾಲಿನ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ)ವಿಧೇಯಕ, 2025ನೇ ಸಾಲಿನ ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿ ಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಫ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ವಿಧೇಯಕ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು 2025ನೇ ಸಾಲಿನ ಕರ್ನಾಟಕ ಲಿಫ್ಟ್ ಗಳ, ಎಸ್ಕಲೇಟರ್ ಗಳ ಮತ್ತು ಪ್ಯಾಸೆಂಜರ್ ಕನ್ವೇಯರ್ ಗಳ (ತಿದ್ದುಪಡಿ) ವಿಧೇಯಕವನ್ನು ಹಾಗೂ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್ ಅವರು 2025ನೇ ಸಾಲಿನ ಕರ್ನಾಟಕ ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ (ಕ್ಷೇಮಾಭಿವೃದ್ಧಿ ಕ್ರಮಗಳು ಮತ್ತು ದೌರ್ಜನ್ಯಗಳ ವಿರುದ್ಧ ರಕ್ಷಣೆ)ವಿಧೇಯಕಗಳನ್ನು ಮಂಡಿಸಿದರು. ವಿಧೇಯಕಗಳ ಪ್ರಸ್ತಾವನೆಗಳನ್ನು ಅಂಗೀಕರಿಸಲಾಯಿತು