ದೆಹಲಿ: ಭಾರತದ ಮುಂದಿನ ಅಂದ್ರೆ, 15 ನೇ ರಾಷ್ಟ್ರಪತಿಯಾಗಿ ಯಾರು ಆಯ್ಕೆಯಾಗಲಿದ್ದಾರೆ ಎಂದು ಇಂದು ಖಚಿತವಾಗಲಿದೆ.
ರಾಷ್ಟ್ರಪತಿ ರಾಮನಥ್ ಕೋವಿಂದ್ ಅವರ ಅಧಿಕಾರಾವಧಿ ಜು. 24ಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಹೊಸ ರಾಷ್ಟ್ರಪತಿ ಆಯ್ಕೆಗೆ ಜು. 18ರಂದು ಮತದಾನ ನಡೆದಿತ್ತು. ಇಂದು ಅದರ ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ.
ಬಿಜೆಪಿ ನೇತೃತ್ವದ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಎನ್ಡಿಎ ಅಭ್ಯರ್ಥಿಗೆ ಸ್ಪರ್ಧೆಯಲ್ಲಿ ಸ್ಪಷ್ಟವಾದ ಬಲವಿದೆ ಎನ್ನಲಾಗಿದೆ.
ಬಿಜೆಪಿ ನೇತೃತ್ವದ ಎನ್ಡಿಎಯ ದ್ರೌಪದಿ ಮುರ್ಮು ಮತ್ತು ಪ್ರತಿಪಕ್ಷದ ಯಶವಂತ್ ಸಿನ್ಹಾ ಅವರು ಸ್ಪರ್ಧೆಯಲ್ಲಿ ಪರಸ್ಪರ ಸ್ಪರ್ಧಿಸಿದ್ದಾರೆ. ಮುರ್ಮು ಪರವಾಗಿ ಮತಗಳು ಸ್ಪಷ್ಟವಾಗಿ ಬಿದ್ದಿವೆ ಎನ್ನಲಾಗಿದೆ. ಬುಡಕಟ್ಟು ಜನಾಂಗದ ನಾಯಕಿ ಹಾಗೂ ಜಾರ್ಖಂಡ್ನ ಮಾಜಿ ರಾಜ್ಯಪಾಲರಾಗಿದ್ದ ದ್ರೌಪದಿ ಮುರ್ಮು ಅವರು ಆಯ್ಕೆಯಾದರೆ ರಾಷ್ಟ್ರಪತಿ ಹುದ್ದೆ ಅಲಂಕರಿಸುವ ಎರಡನೇ ಮಹಿಳೆ ಮತ್ತು ಬುಡಕಟ್ಟು ಜನಾಂಗದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ.
ಕೋವಿಂದ್ ಅವರ ಅಧಿಕಾರಾವಧಿ ಜುಲೈ 24 ರಂದು ಕೊನೆಗೊಳ್ಳಲಿದ್ದು, ಜುಲೈ 25 ರಂದು ನೂತನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
BIGG NEWS : ರಾಜ್ಯದಲ್ಲಿ ಮಳೆಯಿಂದ ಬೆಳೆ ನಷ್ಟವಾದ ರೈತರಿಗೆ ಸಿಹಿಸುದ್ದಿ : ಮತ್ತೊಮ್ಮೆ ಬೀಜ, ಗೊಬ್ಬರ ವಿತರಣೆ
BIGG NEWS : ಜುಲೈ 24 ರಿಂದ ಸಿಎಂ ಬೊಮ್ಮಾಯಿ 3 ದಿನ ದೆಹಲಿ ಪ್ರವಾಸ : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ!