ಬೆಂಗಳೂರು: ದೀರ್ಘಕಾಲದಿಂದ ನ್ಯಾಯಾಲಯಗಳಲ್ಲಿ ಬಾಕಿ ಇರುವ ಬಡವರ ವ್ಯಾಜ್ಯಗಳನ್ನು ಆರು ತಿಂಗಳಲ್ಲಿ ತ್ವರಿತವಾಗಿ ವಿಲೇವಾರಿ ಮಾಡುವ ʼಸಿವಿಲ್ ಪ್ರಕ್ರಿಯಾ ಸಂಹಿತಾ (ಕರ್ನಾಟಕ ತಿದ್ದುಪಡಿ) ವಿಧೇಯಕ – 2023ʼಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ರಾಜಕೀಯ ಪಕ್ಷಗಳ ವಿರುದ್ಧವೂ ಮಾನಹಾನಿ ಪ್ರಕರಣ ದಾಖಲಿಸಬಹುದು: ಹೈಕೋರ್ಟ್ ಮಹತ್ವದ ಅಭಿಪ್ರಾಯ!
ಗೃಹಿಣಿ ಹೆಸರಿನಲ್ಲಿ ಮನೆ ಖರೀದಿಸಿದ್ರೆ, ಅದು ಕುಟುಂಬದ ಆಸ್ತಿ : ಹೈಕೋರ್ಟ್ ಮಹತ್ವದ ಆದೇಶ
Shocking : ಇದು ನಿಜವೇ.? ‘ಇಡ್ಲಿ’ ಇಷ್ಟೊಂದು ಅಪಾಯ ತಂದೊಡ್ತಿದ್ಯಾ.? ‘ಹೊಸ ಅಧ್ಯಯನ’ದಿಂದ ಶಾಕಿಂಗ್ ಸಂಗತಿ
ವಿಧಾನ ಪರಿಷತ್‌ನಲ್ಲಿ ಸ್ವಯಂ ಹೇಳಿಕೆ ನೀಡಿದ ಅವರು, ”ಉಭಯ ಸದನಗಳು ಅನುಮೋದಿಸಿದ್ದ ವಿಧೇಯಕವನ್ನು ರಾಜ್ಯಪಾಲರು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಿಕೊಟ್ಟಿದ್ದರು. ಫೆ 21ರಂದು ರಾಷ್ಟ್ರಪತಿಗಳು ವಿಧೇಯಕಕ್ಕೆ ಸಹಿ ಹಾಕಿದ್ದಾರೆ. ಹಾಗಾಗಿ ಅದನ್ನು ಜಾರಿಗೊಳಿಸಲಾಗುವುದು ಅಂಥ ಅವರು ಹೇಳಿದರು . ”ಸಣ್ಣ ಅಥವಾ ಅತಿಸಣ್ಣ ರೈತರು ಹಾಗೂ ಆರ್ಥಿಕವಾಗಿ ದುರ್ಬಲವಾದ ವರ್ಗಗಳ ವ್ಯಕ್ತಿಗಳು, ಅಂದರೆ ಎಲ್ಲಾ ಮೂಲಗಳಿಂದ ಬರುವ ವಾರ್ಷಿಕ ಆದಾಯವು 50,000 ರೂ. ಮೀರದ, ದೀರ್ಘಕಾಲದಿಂದ ನ್ಯಾಯಾಲಯಗಳಲ್ಲಿ ಬಾಕಿ ಇರುವ ವ್ಯಾಜ್ಯದ ವಿರುದ್ಧ ಹೋರಾಡಲು ಶಕ್ತಿ ಇಲ್ಲದ ವ್ಯಕ್ತಿಗಳಿಗೆ ಸೇರಿದ ಪ್ರಕರಣಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಲು ಇದರಲ್ಲಿ ಕಾಲಮಿತಿ ನಿಗದಿಪಡಿಸಲಾಗಿದೆ, ಅಂತ ಅವರು ಇದೇ ವೇಳೆ ತಿಳಿಸಿದ್ದಾರೆ.