ನವದೆಹಲಿ: ಗೋವಾದ ಶಿರ್ಗಾವ್ ನಲ್ಲಿ ಕಾಲ್ತುಳಿತಕ್ಕೆ ಆರು ಮಂದಿ ಬಲಿಯಾದ ದುರಂತ ಘಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಶನಿವಾರ ದುಃಖ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರಪತಿ ಮುರ್ಮು ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.ಎಕ್ಸ್ನಲ್ಲಿ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ದ್ರೌಪದಿ ಮುರ್ಮು, “ಗೋವಾದ ಶಿರ್ಗಾಂವ್ನಲ್ಲಿ ಕಾಲ್ತುಳಿತದ ದುರದೃಷ್ಟಕರ ಘಟನೆಯ ಬಗ್ಗೆ ತಿಳಿದು ದುಃಖವಾಗಿದೆ. ದುಃಖಿತ ಕುಟುಂಬ ಸದಸ್ಯರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕೂಡ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಕಾರ್ಯಾಲಯ, “ಗೋವಾದ ಶಿರ್ಗಾಂವ್ನಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ” ಎಂದಿದ್ದಾರೆ.