ಬೆಂಗಳೂರು: ಈಗಾಗಲೇ ಹಲವು ಪಕ್ಷಗಳು ಎನ್ ಡಿ ಎ ಬೆಂಬಲಿತ ರಾಷ್ಟ್ರಪತಿ ಚುನಾವಣೆ ( President Election 2022 ) ಅಭ್ಯರ್ಥಿ ದ್ರೌಪದಿ ಮುರ್ಮು ( Draupadi Murmu ) ಅವರಿಗೆ ಬೆಂಬಲ ಸೂಚಿಸಿವೆ. ಈ ಬೆನ್ನಲ್ಲೇ ಜೆಡಿಎಸ್ ಪಕ್ಷದಿಂದ ಕೂಡ ದ್ರೌಪದಿ ಮುರ್ಮು ಅವರಿಗೆ ಬೆಂಬಲ ಘೋಷಿಸಲಾಗಿದೆ.
ಇಂದು ವಿಧಾನಸೌಧದಲ್ಲಿ ಈ ಬಗ್ಗೆ ಮಾಹಿತಿ ನೀಡಿದಂತ ಜೆಡಿಎಸ್ ಪಕ್ಷದ ( JDS Party ) ಶಾಸಕಾಂಗ ಸಭೆಯ ಉಪ ನಾಯಕ ಬಂಡೆಪ್ಪ ಕಾಶಂಪೂರ ಅವರು, ರಾಷ್ಟ್ರಪತಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಎನ್ ಡಿ ಎ ಬೆಂಬಲಿತ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ಸೂಚಿಸಲಾಗುತ್ತಿದೆ ಎಂದರು.
ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ: ಜು.18ರಿಂದ ಬಿಎಂಟಿಸಿಯಿಂದ ವಿದ್ಯಾರ್ಥಿ ರಿಯಾಯಿತಿ ಪಾಸ್ ವಿತರಣೆ
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಸಂಸತ್ ನಲ್ಲಿ ಮಹಿಳಾ ಮೀಸಲಾತಿಯ ಬಗ್ಗೆ ಧ್ವನಿ ಎತ್ತಿದ್ದಾರೆ. ಆ ನಿಟ್ಟಿನಲ್ಲಿ ಮಹಿಳೆಗೆ ಬೆಂಬಲಿಸೋ ನಿಟ್ಟಿನಲ್ಲಿ ದ್ರೌಪದಿ ಮುರ್ಮು ಅವರಿಗೆ ಬೆಂಬಲಿಸಲಾಗುತ್ತಿದೆ. ನಾವು ಪಕ್ಷ ಯಾವುದೆಂದು ನೋಡುತ್ತಿಲ್ಲ. ಆದಿವಾಸಿ ಜನಾಂಗದವರಾಗಿದ್ದರಿಂದ ಬೆಂಬಲ ನೀಡುತ್ತಿದ್ದೇವೆ ಎಂದು ಹೇಳಿದರು.