ಬೆಂಗಳೂರು : ಲೋಕಸಭಾ ಚುನಾವಣೆಗೆ ಟಿಕೆಟ್ ಕೈತಪ್ಪಿದರಿಂದ ಈಗಾಗಲೇ ಬಿಜೆಪಿಯಲ್ಲಿ ಹಲವು ಹಿರಿಯ ನಾಯಕರು ಸೊ ಪಕ್ಷದ ವಿರೋಧಿ ಬಂಡಾಯ ವೆದ್ದಿದ್ದು ಇದೀಗ ಕಾಂಗ್ರೆಸ್ ನಲ್ಲಿ ಕೂಡ ಹಲವು ಕಡೆಗಳಲ್ಲಿ ಆ ಟಿಕೆಟ್ ಬಿಡುಗಡೆಗ ಮುನ್ನ ಕಾಂಗ್ರೆಸ್ ಮೇಲೆ ಒತ್ತಡ ಹೆಚ್ಚಾಗಿದೆ ಇದೀಗ ಬಾಗಲಕೋಟೆ ಜಿಲ್ಲೆಯಲ್ಲಿ ವೀಣಾ ಕಾಶಪ್ಪನವರಿಗೆ ಟಿಕೆಟ್ ನೀಡಬೇಕೆಂದು ಅವರ ಬೆಂಬಲಿಗರು ಒತ್ತಾಯ ಮಾಡಿದ್ದಾರೆ.
BREAKING: ಯಾವುದೇ ಮಾಹಿತಿಯನ್ನು ಮರೆಮಾಚಿಲ್ಲ ಎಂದು ಅಫಿಡವಿಟ್ ಸಲ್ಲಿಸುವಂತೆ SBIಗೆ ಸುಪ್ರಿಂಕೋರ್ಟ್ ಸೂಚನೆ
ರಾಜ್ಯ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿರುವ ವೀಣಾ ಕಾಶಪ್ಪನವರಿಗೆ ಟಿಕೆಟ್ ನೀಡುವಂತೆ ಇದೀಗ ಲಾಬಿ ನಡೆಯುತ್ತಿದ್ದು ಬಾಗಲಕೋಟೆಯಿಂದ ಟಿಕೆಟ್ ನೀಡುವಂತೆ ಒತ್ತಾಯ ಕೇಳಿ ಬಂದಿದೆ. ಈಗಾಗಲೇ ಬಾಗಲಕೋಟೆಯಿಂದ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತ ಪಾಟೀಲ್ ಹೆಸರು ಕೇಳಿ ಬಂದಿದೆ.
ಪಾರ್ಟಿಗಳಲ್ಲಿ ಹಾವಿನ ವಿಷದ ವ್ಯವಸ್ಥೆ ಮಾಡಿದ್ದಾಗಿ ಯೂಟ್ಯೂಬರ್ ಎಲ್ವಿಶ್ ಯಾದವ್ ಒಪ್ಪಿಕೊಂಡಿದ್ದಾನೆ : ಮೂಲಗಳು
ಆದರೆ ಸಂಯುಕ್ತ ಪಾಟೀಲ್ ಗೆ ಕಾಂಗ್ರೆಸ್ ಟಿಕೇಟ್ ನೀಡಬಾರದೆಂದು ಒತ್ತಡಕ್ಕೆ ಹೇರಲಾಗುತ್ತಿದೆ.ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ನೀಡುವಂತೆ ಇದೀಗ ಕಾಶಪ್ಪನವರ ಬೆಂಬಲಿಗರು ಒತ್ತಾಯ ಮಾಡುತ್ತಿದ್ದಾರೆ. ಲೋಕಸಭೆಗೆ ಕಾಂಗ್ರೆಸ್ ನಲ್ಲಿ ಇದೀಗ ಜೋರಾಗಿ ಲಾಭಿ ನಡೆಯುತ್ತಿದೆ.
BREAKING: ದೆಹಲಿ ಮಾಜಿ ಸಚಿವ ಸತ್ಯೇಂದರ್ ಜೈನ್ ವಿರುದ್ಧದ ಅರ್ಜಿ ವಜಾಗೊಳಿಸಿದ ದೆಹಲಿ ಕೋರ್ಟ್
ವೀಣಾ ಕಾಶಪ್ಪನವರಿಗೆ ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡುವಂತೆ ಒತ್ತಾಯ ಕೇಳಿಬರುತ್ತಿದೆ. ಮುಖ್ಯಮಂತ್ರಿ ನಿವಾಸದ ಬಳಿ ಕಾಶಪ್ಪನವರು ಬೆಂಬಲಿಗರು ಆಗಮಿಸಿದ್ದಾರೆ. ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನ್ನೂ ಘೋಷಣೆ ಆಗಿಲ್ಲ. ಟಿಕೆಟ್ ಗೆ ಸಚಿವ ಶಿವಾನಂದ್ ಪುತ್ರಿ ಸಂಯುಕ್ತ ಪಾಟೀಲ್ ಹೆಸರು ಕೇಳಿ ಬರುತ್ತಿದೆ. ಸಂಯುಕ್ತ ಪಾಟಿಲ್ ಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಬಾರದು ವೀಣಾ ಕಾಶಪ್ಪನವರಿಗೆ ಟಿಕೆಟ್ ನೀಡುವಂತೆ ಅಭಿಮಾನಿಗಳಿಂದ ಒತ್ತಾಯ ಕೇಳಿಬಂದಿದೆ.