Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜೂ.21ಕ್ಕೆ ‘NEET’ ಮರುಪರೀಕ್ಷೆ ಹಿನ್ನಲೆ : ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ : ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ

ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದ WHO: ಎಬೋಲಾ ಭೀತಿ ಹಿನ್ನೆಲೆಯಲ್ಲಿ ಭಾರತೀಯರಿಗೆ ಕೇಂದ್ರದಿಂದ ‘ಪ್ರವಾಸ ಸಲಹೆ’ ಬಿಡುಗಡೆ!

ALERT : ರಾತ್ರಿ ಪೂರ್ತಿ ಮಲಗಿದ್ರೂ ಬೆಳಗ್ಗೆ ಎದ್ದ ತಕ್ಷಣ ಸುಸ್ತು ಕಾಡ್ತಾ ಇದೆಯಾ? ಈ ಡೇಂಜರಸ್ ಲಕ್ಷಣಗಳನ್ನ ನಿರ್ಲಕ್ಷಿಸಬೇಡಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘TET ಪಾಸ್’ ಮಾಡಿದ ಪ್ರಾಥಮಿಕ ಶಾಲಾ ಶಿಕ್ಷಕರು 6, 7ನೇ ತರಗತಿಗೆ ಬೋಧಿಸಲು ಅರ್ಹರು: ರಾಜ್ಯ ಸರ್ಕಾರ ಆದೇಶ
KARNATAKA

‘TET ಪಾಸ್’ ಮಾಡಿದ ಪ್ರಾಥಮಿಕ ಶಾಲಾ ಶಿಕ್ಷಕರು 6, 7ನೇ ತರಗತಿಗೆ ಬೋಧಿಸಲು ಅರ್ಹರು: ರಾಜ್ಯ ಸರ್ಕಾರ ಆದೇಶ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದಲ್ಲಿ 1 ರಿಂದ 5ನೇ ತರಗತಿಗಳಿಗೆ ಬೋಧಿಸುತ್ತಿರುವಂತ ಪ್ರಥಮಿಕ ಶಾಲಾ ಶಿಕ್ಷಕರು 6, 7ನೇ ತರಗತಿಗೆ ಟಿಇಟಿ ಪರೀಕ್ಷೆ ಪಾಸ್ ಮಾಡಿದ್ದರೇ ಅರ್ಹರಾಗಿರುತ್ತಾರೆ ಎಂಬುದಾಗಿ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ.

ಈ ಕುರಿತಂತೆ ಕರ್ನಾಟಕ ರಾಜ್ಯಪತ್ರವನ್ನು ಹೊರಡಿಸಿರುವಂತ ಸರ್ಕಾರವು,  1 ರಿಂದ 5ನೇ ತರಗತಿಗೆ ಬೋಧಿಸುವ ಪ್ರಾಥಮಿಕ ಶಾಲಾ ಶಿಕ್ಷಕರು NCTE ಮಾರ್ಗಸೂಚಿಗಳಲ್ಲಿ ನಿರ್ಧಿಷ್ಟಪಡಿಸಿದಂತೆ ಮತ್ತು ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಜಾರಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿರುವಂತೆ ಅಗತ್ಯ ವಿಷಯಗಳಲ್ಲಿ ಪದವಿಯನ್ನು ಹಾಗೂ TET ಪ್ರಮಾಣ ಪತ್ರವನ್ನು ಹೊಂದಿದ್ದಲ್ಲಿ 6 ಮತ್ತು 7 ನೇ ತರಗತಿಗೆ ಬೋಧಿಸಲು ಅರ್ಹರಾಗತಕ್ಕದ್ದು ಎಂದಿದೆ.

ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) ನಿಯಮಗಳು, 1967ನ್ನು ಈ ಮುಂದಿನಂತೆ ತಿದ್ದುಪಡಿ ಮಾಡಲು ಕರ್ನಾಟಕ ನಾಗರಿಕ ಸೇವೆಗಳು ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ 14) ರ ಕಲಂ 3 ಉಪ ಕಲಂ (1) ರೊಂದಿಗೆ ಓದಿಕೊಂಡ ಕಲಂ 8 ರಂತೆ ಪ್ರದತ್ತವಾದ ಅಧಿಕಾರದನ್ವಯ ಕರ್ನಾಟಕ ಸರ್ಕಾರವು ಉದ್ದೇಶಿಸಿದ್ದು, ಅದರಿಂದ ಬಾಧಿತರಾಗಲು ಸಂಭವವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಸದರಿ ಅಧಿನಿಯಮದ ಕಲಂ-3 ರ ಉಪ ಕಲಂ (2) ರ ಖಂಡ (ಎ) ರಲ್ಲಿ ಅಗತ್ಯಪಡಿಸಿರುವಂತೆ ಈ ಮೂಲಕ ಪ್ರಕಟಿಸಿದೆ. ಹಾಗೂ ಸದರಿ ಕರಡು ತಿದ್ದುಪಡಿ ನಿಯಮಗಳನ್ನು, ಅವುಗಳು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 15 ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ತಿಳಿಸಲಾಗಿದೆ.

ಸದರಿ ಕರಡು ತಿದ್ದುಪಡಿ ನಿಯಮಗಳ ಕುರಿತಂತೆ ಯಾವುದೇ ವ್ಯಕ್ತಿಯಿಂದ ನಿಗಧಿತ ಅವಧಿಯೊಳಗೆ ಸ್ವೀಕೃತವಾಗುವ ಯಾವುದೇ ಆಕ್ಷೇಪಣೆ ಅಥವಾ ಸಲಹೆಗಳನ್ನು ರಾಜ್ಯ ಸರ್ಕಾರವು ಪರಿಗಣಿಸುವುದು. ಆಕ್ಷೇಪಣೆ ಮತ್ತು ಸಲಹೆಗಳನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, 6ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ|| ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು -560 001 ಇವರ ವಿಳಾಸಕ್ಕೆ ಕಳುಹಿಸತಕ್ಕದ್ದು.

ಕರಡು ನಿಯಮಗಳು

1. ಶೀರ್ಷಿಕೆ ಮತ್ತು ಪ್ರಾರಂಭ: (1) ಈ ನಿಯಮಗಳನ್ನು ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2025 ಎಂದು ಕರೆಯತಕ್ಕದ್ದು.

(2) ಈ ನಿಯಮಗಳು ಕರ್ನಾಟಕ ರಾಜ್ಯಪತ್ರದಲ್ಲಿ ಅಂತಿಮವಾಗಿ ಪ್ರಕಟಗೊಂಡ ದಿನಾಂಕದಿಂದ ಜಾರಿಯಾಗತಕ್ಕದ್ದು.

2. ಕೋಷ್ಟಕದ ತಿದ್ದುಪಡಿ: ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) ನಿಯಮಗಳು, 1967ರ ಕೋಷ್ಟಕದಲ್ಲಿ “ಶ್ರೇಣಿ III ಪತ್ರಾಂಕಿತವಲ್ಲದ ಹುದ್ದೆಗಳು” ಶೀರ್ಷಿಕೆಯಡಿಯಲ್ಲಿ ಕ್ರಮ ಸಂಖ್ಯೆ: 66 ರಲ್ಲಿನ ಪ್ರಾಥಮಿಕ ಶಾಲಾ ಶಿಕ್ಷಕರು ತರಗತಿ 1 ರಿಂದ 5 ವರ್ಗದ ಅಂಕಣ ಸಂಖ್ಯೆ (3) ರಲ್ಲಿ:-
1) ಪ್ರಸ್ತುತ ಇರುವ ಟಿಪ್ಪಣಿಯನ್ನು ಟಿಪ್ಪಣಿ-1 ಎಂದು ಸಂಖ್ಯಿಕರಿಸುವುದು: ಮತ್ತು

2) ಅದರಂತೆ ಸಂಖ್ಯಿಕರಿಸಿದ ಸೇರ್ಪಡೆಗೊಳಿಸತಕ್ಕದ್ದು. ಅಂದರೆ, ಟಿಪ್ಪಣಿ-1 ರ ನಂತರ ಈ ಕೆಳಗಿನಂತೆ

ಟಿಪ್ಪಣಿ-2 – 1 ರಿಂದ 5ನೇ ತರಗತಿಗೆ ಬೋಧಿಸುವ ಪ್ರಾಥಮಿಕ ಶಾಲಾ ಶಿಕ್ಷಕರು NCTE ಮಾರ್ಗಸೂಚಿಗಳಲ್ಲಿ ನಿರ್ಧಿಷ್ಟಪಡಿಸಿದಂತೆ ಮತ್ತು ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಜಾರಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿರುವಂತೆ ಅಗತ್ಯ ವಿಷಯಗಳಲ್ಲಿ ಪದವಿಯನ್ನು ಹಾಗೂ TET ಪಮಾಣ ಪತ್ರವನ್ನು ಹೊಂದಿದ್ದಲ್ಲಿ, 6 ಮತ್ತು 7 ನೇ ತರಗತಿಗೆ ಬೋಧಿಸಲು ಅರ್ಹರಾಗತಕ್ಕದ್ದು ಎಂಬುದಾಗಿ ಸ್ಪಷ್ಟ ಪಡಿಸಿದೆ.

ರಾಜ್ಯಕ್ಕೆ ದೀಪಾವಳಿ ಗಿಫ್ಟ್‌: 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳ- ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್

Good News: ಬೆಂಗಳೂರಿನ ಜನತೆಗೆ ದೀಪಾವಳಿ ಗಿಫ್ಟ್: ಈ ಎಲ್ಲರಿಗೂ ‘ಎ‌‌’ ಖಾತೆ ವಿತರಣೆ, ಇಷ್ಟು ಶುಲ್ಕ ನಿಗದಿ

Share. Facebook Twitter LinkedIn WhatsApp Email

Related Posts

ಜೂ.21ಕ್ಕೆ ‘NEET’ ಮರುಪರೀಕ್ಷೆ ಹಿನ್ನಲೆ : ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ : ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ

2 Mins Read

ALERT : ರಾತ್ರಿ ಪೂರ್ತಿ ಮಲಗಿದ್ರೂ ಬೆಳಗ್ಗೆ ಎದ್ದ ತಕ್ಷಣ ಸುಸ್ತು ಕಾಡ್ತಾ ಇದೆಯಾ? ಈ ಡೇಂಜರಸ್ ಲಕ್ಷಣಗಳನ್ನ ನಿರ್ಲಕ್ಷಿಸಬೇಡಿ!

2 Mins Read

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಅಟಲ್ ಜೀ ಜನಸ್ನೇಹಿ ಕೇಂದ್ರ’ ಯೋಜನೆಯಡಿ ಸಿಗಲಿದೆ ಈ 44 ಸೇವೆಗಳು

2 Mins Read
Recent News

ಜೂ.21ಕ್ಕೆ ‘NEET’ ಮರುಪರೀಕ್ಷೆ ಹಿನ್ನಲೆ : ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ : ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ

ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದ WHO: ಎಬೋಲಾ ಭೀತಿ ಹಿನ್ನೆಲೆಯಲ್ಲಿ ಭಾರತೀಯರಿಗೆ ಕೇಂದ್ರದಿಂದ ‘ಪ್ರವಾಸ ಸಲಹೆ’ ಬಿಡುಗಡೆ!

ALERT : ರಾತ್ರಿ ಪೂರ್ತಿ ಮಲಗಿದ್ರೂ ಬೆಳಗ್ಗೆ ಎದ್ದ ತಕ್ಷಣ ಸುಸ್ತು ಕಾಡ್ತಾ ಇದೆಯಾ? ಈ ಡೇಂಜರಸ್ ಲಕ್ಷಣಗಳನ್ನ ನಿರ್ಲಕ್ಷಿಸಬೇಡಿ!

BREAKING : ಎಬೋಲಾ ಭೀತಿ: 3 ಆಫ್ರಿಕನ್ ದೇಶಗಳಿಗೆ ಪ್ರಯಾಣಿಸದಂತೆ ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

State News
KARNATAKA

ಜೂ.21ಕ್ಕೆ ‘NEET’ ಮರುಪರೀಕ್ಷೆ ಹಿನ್ನಲೆ : ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ : ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ

By ಸುರೇಶ್‌ KARNATAKA 2 Mins Read

ಬೆಂಗಳೂರು: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ ಯುಜಿ (NEET-UG) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ…

ALERT : ರಾತ್ರಿ ಪೂರ್ತಿ ಮಲಗಿದ್ರೂ ಬೆಳಗ್ಗೆ ಎದ್ದ ತಕ್ಷಣ ಸುಸ್ತು ಕಾಡ್ತಾ ಇದೆಯಾ? ಈ ಡೇಂಜರಸ್ ಲಕ್ಷಣಗಳನ್ನ ನಿರ್ಲಕ್ಷಿಸಬೇಡಿ!

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಅಟಲ್ ಜೀ ಜನಸ್ನೇಹಿ ಕೇಂದ್ರ’ ಯೋಜನೆಯಡಿ ಸಿಗಲಿದೆ ಈ 44 ಸೇವೆಗಳು

ALERT : ಮನುಷ್ಯ ಎಷ್ಟು ಡಿಗ್ರಿ ತಾಪಮಾನ ತಡೆದುಕೊಳ್ಳಬಲ್ಲ ಗೊತ್ತಾ? ಇಲ್ಲಿದೆ ಶಾಕಿಂಗ್ ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.