ಜಾಲೌನ್(ಉತ್ತರ ಪ್ರದೇಶ): ದೇಶಾದ್ಯಂತ ಮಳೆ ರೌದ್ರನರ್ತನಕ್ಕೆ ಒಂದಲ್ಲ ಒಂದು ಅವಾಂತರ ಸೃಷ್ಟಿಯಾಗುತ್ತಲೇ ಇರುತ್ತದೆ. ಅದರಲ್ಲೂ ಉತ್ತರ ಪ್ರದೇಶದ ಜಾಲೌನ್ ಜಿಲ್ಲೆಯ ಚಿರಿಯಾ ಸಲೆಂಪುರ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದ 296 ಕಿ.ಮೀ. ಉದ್ದದ ಬುಂದೇಲ್ಖಂಡ್ ಎಕ್ಸ್ಪ್ರೆಸ್ವೇ ರಸ್ತೆಯ ಒಂದು ಭಾಗದಲ್ಲಿ ಮಳೆಗೆ ಗುಂಡಿ ಬಿದ್ದಿದೆ.
BIGG BREAKING NEWS : `ಶಿಕಾರಿಪುರ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧೆ : ಮಾಜಿ ಸಿಎಂ ಬಿಎಸ್ ವೈ ಘೋಷಣೆ
ಉತ್ತರ ಪ್ರದೇಶದ ಜಾಲೌನ್ ಜಿಲ್ಲೆಯ ಚಿರಿಯಾ ಸಲೆಂಪುರ ಪ್ರದೇಶದಲ್ಲಿ ಹಾದು ಹೋಗಿರುವ ಮಾರ್ಗದಲ್ಲಿ ಅಭಿವೃದ್ಧಿಪಡಿಸಲಾದ ರಸ್ತೆಯ ಒಂದು ಭಾಗದಲ್ಲಿ ಕನಿಷ್ಠ ಒಂದೂವರೆ ಅಡಿಗಳಷ್ಟು ಆಳವಿರುವ ಗುಂಡಿ ಬಿದ್ದಿದೆ ಎಂದು ಯುಪಿ ಎಕ್ಸ್ಪ್ರೆಸ್ವೇ ಇಂಡಸ್ಟ್ರಿಯಲ್ ಅಥಾರಿಟಿಯ ವಕ್ತಾರ ದುರ್ಗೇಶ್ ಉಪಾಧ್ಯಾಯ ಹೇಳಿದ್ದಾರೆ.
ತುರ್ತಾಗಿ ರಸ್ತೆ ಗುಂಡಿಯನ್ನು ಮುಚ್ಚಲಾಗಿದ್ದು, ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ದುರ್ಗೇಶ್ ಉಪಾಧ್ಯಾಯ ತಿಳಿಸಿದ್ದಾರೆ.
BIGG BREAKING NEWS : `ಶಿಕಾರಿಪುರ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧೆ : ಮಾಜಿ ಸಿಎಂ ಬಿಎಸ್ ವೈ ಘೋಷಣೆ
ಬಿಜೆಪಿ ಸಂಸದ ವರುಣ್ ಗಾಂಧಿ ವಾಗ್ದಾಳಿ
₹ 15 ಸಾವಿರ ಕೋಟಿ ವೆಚ್ಚ ಮಾಡಿ ನಿರ್ಮಿಸಿರುವ ಎಕ್ಸ್ಪ್ರೆಸ್ವೇ 5 ದಿನಗಳ ಮಳೆಯನ್ನು ಎದುರಿಸಿ ನಿಲ್ಲಲು ಸಾಧ್ಯವಾಗುವುದಿಲ್ಲ ಎಂದಾದರೆ, ಅದರ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆ ಹುಟ್ಟಿಕೊಳ್ಳುತ್ತದೆ. ಯೋಜನೆಯ ಮುಖ್ಯಸ್ಥ, ಸಂಬಂಧಪಟ್ಟ ಇಂಜಿನಿಯರ್, ಕಾಮಗಾರಿ ನಡೆಸಿದ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವರುಣ್ ಗಾಂಧಿ ಟ್ವೀಟ್ ಮಾಡಿದ್ದಾರೆ.
15 हजार करोड़ की लागत से बना एक्सप्रेसवे अगर बरसात के 5 दिन भी ना झेल सके तो उसकी गुणवत्ता पर गंभीर प्रश्न खड़े होते हैं।
इस प्रोजेक्ट के मुखिया, सम्बंधित इंजीनियर और जिम्मेदार कंपनियों को तत्काल तलब कर उनपर कड़ी कार्यवाही सुनिश्चित करनी होगी।#BundelkhandExpressway pic.twitter.com/krD6G07XPo
— Varun Gandhi (@varungandhi80) July 21, 2022
ಬುಂದೇಲ್ಖಂಡ್ ಎಕ್ಸ್ಪ್ರೆಸ್ವೇಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಒಂದೇ ವಾರದಲ್ಲಿ ಭ್ರಷ್ಟಾಚಾರದ ದೊಡ್ಡ ಹೊಂಡಗಳು ಕಾಣಿಸಿಕೊಂಡವು. ಬಿಜೆಪಿ ಅಭಿವೃದ್ಧಿ ಕೆಲಸಗಳನ್ನು ಕೇವಲ ಅರ್ಧಕ್ಕರ್ಧ ಪೂರ್ಣಗೊಳಿಸುತ್ತದೆ ಎಂಬುದಕ್ಕೆ ತಾಜಾ ಉದಾಹರಣೆಯಿದು ಎಂದು ಎಸ್ಪಿ ವರಿಷ್ಠ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ. ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಟೀಕಿಸಿದ್ದಾರೆ.
BIGG BREAKING NEWS : `ಶಿಕಾರಿಪುರ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧೆ : ಮಾಜಿ ಸಿಎಂ ಬಿಎಸ್ ವೈ ಘೋಷಣೆ