ಇಟಾನಗರ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅರುಣಾಚಲ ಪ್ರದೇಶದ ಇಟಾನಗರದ ಹೊಳ್ಳಂಗಿಯಲ್ಲಿ ಶನಿವಾರ ಮೊದಲ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದಾರೆ.
BIGG NEWS: ಬೆಂಗಳೂರು- ಮೈಸೂರು ಹೆದ್ದಾರಿ ದುರಸ್ತಿ ಮಾಡುವಂತೆ ಪ್ರತಾಪ್ ಸಿಂಹಗೆ ಗಡುವು
ಇದು ಈಶಾನ್ಯ ಪ್ರದೇಶದ 16 ನೇ ವಿಮಾನ ನಿಲ್ದಾಣವಾಗಿದೆ. ಹೊಸದಾಗಿ ನಿರ್ಮಾಣವಾಗಿರುವ ದೋನಿ ಪೋಲೋ ವಿಮಾನ ನಿಲ್ದಾಣ (Donyi Polo Airport) 640 ಕೋಟಿ ರೂ.ಗೂ ಹೆಚ್ಚಿನ ವೆಚ್ಚದಲ್ಲಿ ನಿರ್ಮಾಣವಾಗಿದ್ದು, 690 ಎಕರೆ ಪ್ರದೇಶದಲ್ಲಿ ವ್ಯಾಪಿಸಿದೆ.
BIGG NEWS: ಬೆಂಗಳೂರು- ಮೈಸೂರು ಹೆದ್ದಾರಿ ದುರಸ್ತಿ ಮಾಡುವಂತೆ ಪ್ರತಾಪ್ ಸಿಂಹಗೆ ಗಡುವು
ಅರುಣಾಚಲ ಪ್ರದೇಶದ ಶ್ರೀಮಂತ ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರತಿಬಿಂಬಿಸುವಂತೆ ವಿಮಾನ ನಿಲ್ದಾಣಕ್ಕೆ ಹೆಸರಿಡಲಾಗಿದೆ. ಸ್ಥಳೀಯ ಭಾಷೆಯಲ್ಲಿ ದೋನಿ ಎಂದರೆ ಸೂರ್ಯ ಮತ್ತು ಪೋಲೋ ಎಂದರೆ ಚಂದ್ರ ಎನ್ನಲಾಗಿದೆ.
ವರದಿಗಳ ಪ್ರಕಾರ, ಹೊಳ್ಳಂಗಿಯಲ್ಲಿ 955 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಟರ್ಮಿನಲ್ 4,100 ಚದರ ಮೀ. ವಿಸ್ತೀರ್ಣವನ್ನು ಹೊಂದಿದೆ.
BIGG NEWS: ಬೆಂಗಳೂರು- ಮೈಸೂರು ಹೆದ್ದಾರಿ ದುರಸ್ತಿ ಮಾಡುವಂತೆ ಪ್ರತಾಪ್ ಸಿಂಹಗೆ ಗಡುವು
ಇದು ಗಂಟೆಗೆ 200 ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದೆ.ವಿಮಾನ ನಿಲ್ದಾಣದ ಟರ್ಮಿನಲ್ ಆಧುನಿಕ ಕಟ್ಟಡವಾಗಿದ್ದು, ಇಂಧನ ದಕ್ಷತೆ, ನವೀಕರಿಸಬಹುದಾದ ಶಕ್ತಿ ಮತ್ತು ಸಂಪನ್ಮೂಲಗಳ ಮರುಬಳಕೆಯನ್ನು ಉತ್ತೇಜಿಸುತ್ತದೆ ಎಂದು ಅಧಿಕೃತ ಮಾಹಿತಿಯಲ್ಲಿ ತಿಳಿಸಲಾಗಿದೆ