ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಂಗಳೂರಿಗೆ ಬರುತ್ತಿದ್ದಾರೆ. ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಲಿದ್ದಾರೆ.
BIGG NEWS: ಟಿಪ್ಪು ಜಯಂತಿಗೆ ಶುಭಾಶಯ ಕೋರಿದ ಮಾಜಿ ಸಿಎಂ ಸಿದ್ದರಾಮಯ್ಯ
ಈ ಹಿನ್ನೆಲೆಯಲ್ಲಿ ರೈಲು ನಿಲ್ದಾಣ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಬೆಳಿಗ್ಗೆ 8ರಿಂದ 11:30ರ ಅವಧಿಯಲ್ಲಿ ನಗರ ರೈಲು ನಿಲ್ದಾಣಕ್ಕೆ ಬರಬೇಕಿದ್ದ ಹಾಗೂ ನಗರ ರೈಲು ನಿಲ್ದಾಣದಿಂದ ಸಂಚರಿಸಬೇಕಿದ್ದ ಹಲವು ರೈಲುಗಳನ್ನು ಯಶವಂತಪುರ ಹಾಗೂ ಬೈಯಪ್ಪನಹಳ್ಳಿ ನಿಲ್ದಾಣಗಳಿಗೆ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ಅವಧಿಯಲ್ಲಿ ನಗರ ರೈಲು ನಿಲ್ದಾಣದಿಂದ ಸಂಚಾರ ಆರಂಭಿಸಬೇಕಿದ್ದ ರೈಲುಗಳು 12 ಗಂಟೆಯ ನಂತರ ಹೊರಡಲಿವೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಅಧಿಕೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.
BIGG NEWS: ಟಿಪ್ಪು ಜಯಂತಿಗೆ ಶುಭಾಶಯ ಕೋರಿದ ಮಾಜಿ ಸಿಎಂ ಸಿದ್ದರಾಮಯ್ಯ
ರೈಲು ನಿಲ್ದಾಣ ಹಾಗೂ ಸುತ್ತಮುತ್ತಲ ಪ್ರದೇಶಗಳಿಗೆ ಪೊಲೀಸರು ಹಾಗೂ ರೈಲ್ವೆ ಇಲಾಖೆಯಿಂದ ಭದ್ರತೆ ಕಲ್ಪಿಸಲಾಗಿದೆ. ಬೆಳಗ್ಗೆ 8 ಗಂಟೆಯಿಂದ ಯಾವುದೇ ರೈಲುಗಳು ನಗರ ನಿಲ್ದಾಣಕ್ಕೆ ಬರುವುದಿಲ್ಲ. ಪ್ಲಾಟ್ಫಾರಂ 7 ಅಥವಾ 8ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ರೈಲು ನಿಲ್ದಾಣ ಸುತ್ತಮುತ್ತಲ ಪ್ರದೇಶದ ಭದ್ರತೆಗಾಗಿ 1200ಕ್ಕೂ ಹೆಚ್ಚು ರೈಲ್ವೆ ಪೊಲೀಸರನ್ನು ನೇಮಿಸಲಾಗಿದೆ.
ಬೆಳಿಗ್ಗೆ 9 ಗಂಟೆಗೆ ಮೋದಿ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ಹೆಲಿಕಾಪ್ಟರ್ನಲ್ಲಿ ಮೇಖ್ರಿ ಸರ್ಕಲ್ ಸಮೀಪದ ಏರ್ಫೋರ್ಸ್ ಕಮಾಂಡ್ಗೆ ಬರಲಿದ್ದಾರೆ. ಅಲ್ಲಿಂದ ಕಾರಿನಲ್ಲಿ ನಗರ ರೈಲು ನಿಲ್ದಾಣಕ್ಕೆ ತೆರಳಲಿದ್ದಾರೆ. ಮಾರ್ಗದಲ್ಲಿ ಭದ್ರತೆಗಾಗಿ 6,500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 20 ಕೆಎಸ್ಆರ್ಪಿ ಹಾಗೂ ಸಿಎಆರ್ ತುಕಡಿಗಳು ಕಾರ್ಯನಿರ್ವಹಿಸಲಿವೆ. ರೈಲು ನಿಲ್ದಾಣದಿಂದ ವಿಮಾನ ನಿಲ್ದಾಣಕ್ಕೆ ಕಾರು ಅಥವಾ ಹೆಲಿಕಾಪ್ಟರ್ ಮೂಲಕ ತೆರಳಲಿದ್ದಾರೆ.
BIGG NEWS: ಟಿಪ್ಪು ಜಯಂತಿಗೆ ಶುಭಾಶಯ ಕೋರಿದ ಮಾಜಿ ಸಿಎಂ ಸಿದ್ದರಾಮಯ್ಯ
ಪ್ರಧಾನಿ ನರೇಂದ್ರ ಮೋದಿ ಭೇಟಿ ವಿವರ ಹೀಗಿದೆ:
ಬೆಳಿಗ್ಗೆ 9 ಗಂಟೆಗೆ ಎಚ್ಎಎಲ್ ಏರ್ಪೋರ್ಟ್ಗೆ ಪ್ರಧಾನಿ ಮೋದಿ ಆಗಮನ.
9.45ಕ್ಕೆ ಹೆಚ್ಎಎಲ್ ಏರ್ ಪೋರ್ಟ್ನಿಂದ ಹೆಲಿಕಾಪ್ಟರ್ ಮೂಲಕ ವಿಧಾನಸೌಧಕ್ಕೆ ಆಗಮಿಸಲಿದ್ದಾರೆ.
9.45 ರಿಂದ 9.55 ರವರೆಗೆ ಶಾಸಕರ ಭವನದಲ್ಲಿ ಕನಕದಾಸ ಮತ್ತು ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ.
10 ಗಂಟೆಗೆ ವಿಧಾನಸೌಧದಿಂದ ರಸ್ತೆ ಮಾರ್ಗವಾಗಿ ಕೆಎಸ್ಆರ್ ರೈಲು ನಿಲ್ದಾಣಕ್ಕೆ ಪ್ರಯಾಣ.
10.20ಕ್ಕೆ ರೈಲು ನಿಲ್ದಾಣ ತಲುಪಲಿರುವ ಮೋದಿ,
10.20 ರಿಂದ 10.40 ವಂದೇ ಭಾರತ್, ಭಾರತ್ ಗೌರವ್ ಕಾಶಿ ದರ್ಶನ್ ರೈಲುಗಳಿಗೆ ಹಸಿರು ನಿಶಾನೆ.
10.45ಕ್ಕೆ ರೈಲು ನಿಲ್ದಾಣದಿಂದ ಹೆಬ್ಬಾಳ ಎಎಫ್ ಟಿಟಿಸಿ ಹೆಲಿಪ್ಯಾಡ್ಗೆ ರಸ್ತೆ ಮಾರ್ಗವಾಗಿ ಪ್ರಯಾಣ.
10.55ಕ್ಕೆ ಎಎಫ್ ಟಿಟಿಸಿ ಹೆಲಿಪ್ಯಾಡ್ಗೆ ಆಗಮನ.
11 ಗಂಟೆಗೆ ಎಎಫ್ ಟಿಟಿಸಿ ಹೆಲಿಪ್ಯಾಡ್ನಿಂದ ಕೆಂಪೇಗೌಡ ಏರ್ ಪೋರ್ಟ್ಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣ.