ಬೆಂಗಳೂರು: ಬೀದರ್ ನಗರದಲ್ಲಿ ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿಗೆ ಜನಿವಾರ ತೆಗೆಸಿದ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಜಿಲ್ಲಾಧಿಕಾರಿಗಳು ಕೆಇಎಗೆ ವರದಿಯಲ್ಲಿ ನೀಡಿದ್ದರು. ಈ ವರದಿ ಆಧರಿಸಿ ತಪ್ಪಿತಸ್ಥ ಪ್ರಿನ್ಸಿಪಾಲ್, ತಪಾಸಣಾ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಕೆ.ಜಿ ಜಗದೀಶ್ ಆದೇಶಿಸಿದ್ದಾರೆ. ಬೀದರ್ ನಗರದ ಸಾಯಿ ಸ್ಪೂರ್ತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದ್ದಂತ ಸಿಇಟಿ ಪರೀಕ್ಷೆ ವೇಳೆಯಲ್ಲಿ ಜನಿವಾರ ತೆಗೆಸಿದ ಆರೋಪ ಕೇಳಿ ಬಂದಿತ್ತು.
ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದಂತ ಅಭ್ಯರ್ಥಿಯು ಜನಿವಾರ ತೆಗೆಯದ ಕಾರಣ ಸಾಯಿ ಸ್ಪೂರ್ತಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಚಂದ್ರಶೇಖರ ಬಿರಾದಾರ್ ಹಾಗೂ ತಪಾಸಣಾ ಸಿಬ್ಬಂದಿ ಸತೀಶ್ ಪವಾರ್ ಸಿಇಟಿ ಪರೀಕ್ಷೆಗೆ ಅವಕಾಶ ನೀಡಿರಲಿಲ್ಲ. ಇದು ವಿವಾದಕ್ಕೆ ಕಾರಣವಾಗಿತ್ತು.
ಇಂದು ಈ ಘಟನೆ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಬೀದರ್ ಜಿಲ್ಲಾಧಿಕಾರಿ ವರದಿ ಸಲ್ಲಿಸಿದ್ದರು. ಈ ವರದಿಯನ್ನು ಆಧರಿಸಿ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಕೆ.ಜಿ ಜಗದೀಶ್ ಅವರು ಖಾಸಗಿ ಕಾಲೇಜಿನ ಪ್ರಿನ್ಸಿಪಾಲ್ ಚಂದ್ರಶೇಖರ ಬಿರಾದಾರ್ ಹಾಗೂ ತಪಾಸಣಾ ಸಿಬ್ಬಂದಿ ಸತೀಶ್ ಪವಾರ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
Online Scam: ನಕಲಿ ವೆಬ್ಸೈಟ್ ಲಿಂಕ್ ಗಳ ಬಗ್ಗೆ ಜಾಗರೂಕರಾಗಿರಲು ಪ್ರವಾಸಿಗರಿಗೆ ಕೇಂದ್ರ ಸರ್ಕಾರ ಸೂಚನೆ
ಜನಿವಾರ ಕಾರಣಕ್ಕೆ ಪರೀಕ್ಷೆ ಬರೆಯಲಾಗದ ವಿದ್ಯಾರ್ಥಿಗೆ ಮತ್ತೊಮ್ಮೆ ಅವಕಾಶ: ಸಚಿವ ಡಾ.ಎಂ.ಸಿ ಸುಧಾಕರ್