ಬೆಳಗಾವಿ : ಯಾವುದೇ ಕಾರಣಕ್ಕೂ ಪೌರನೌಕಕರ ಮಕ್ಕಳ ಶಿಕ್ಷಣಕ್ಕೆ ತಡೆಯುಂಟಾಗಬಾರದು. ಪೌರನೌಕರರ ಮಕ್ಕಳ ಶಿಕ್ಷಣಕ್ಕೆ ಯಾವುದೇ ಸಮಸ್ಯೆ ಬಂದರೂ ಸರ್ಕಾರ ಪರಿಹಾರ ಒದಗಿಸುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಅವರು ಇಂದು ಬೆಳಗಾವಿಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕವಾದ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದರು. ರಾಜ್ಯದಲ್ಲಿ 11133 ಪೌರ ಕಾರ್ಮಿಕರ ನೌಕರಿಯನ್ನು ಖಾಯಂಗೊಳಿಸಲಾಗಿದೆ. ಕರ್ನಾಟಕದಲ್ಲಿ ಸುಮಾರು 42 ಸಾವಿರ ಪೌರಕಾರ್ಮಿಕರಿದ್ದು, ಮುಂದಿನ ದಿನಗಳಲ್ಲಿ ಇವರೆಲ್ಲರಿಗೂ ಖಾಯಂ ನೇಮಕಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪೌರ ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಿ ಎಲ್ಲರಂತೆಯೇ ಉನ್ನತ ಹುದ್ದೆಗಳಿಗೆ ಹೋಗಬೇಕು. ಈ ರೀತಿ ಸಾಮಾಜಿಕ ಬದಲಾವಣೆಯನ್ನು ತರಲಾಗುತ್ತದೆ. ಎಸ್ ಸಿ ಎಸ್ ಟಿ ಜನಾಂಗಕ್ಕೆ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಈ ನಿರ್ಣಯಕ್ಕೆ ಗಟ್ಟಿಯಾಗಿ ನಿಲ್ಲಲು ಸರ್ಕಾರ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಪೌರನೌಕಕರ ಸೇವೆಯನ್ನು ಸರ್ಕಾರ ಗುರುತಿಸಿದೆ. ಬರುವ ದಿನಗಳಲ್ಲಿ ಪೌರನೌಕರರ ಮಕ್ಕಳಿಗೆ ಉತ್ತಮ ವಿದ್ಯೆ ನೀಡಿ, ಅವರ ಭವಿಷ್ಯವನ್ನು ಉಜ್ವಲಗೊಳಿಸಬೇಕು. ಇದಕ್ಕೆ ಸರ್ಕಾರ ಎಲ್ಲ ಸಹಕಾರ ನೀಡುತ್ತದೆ ಎಂದರು.ರಾಜ್ಯದಲ್ಲಿ 11133 ಪೌರ ಕಾರ್ಮಿಕರ ನೌಕರಿಯನ್ನು ಖಾಯಂಗೊಳಿಸಲಾಗಿದೆ. ಕರ್ನಾಟಕದಲ್ಲಿ ಸುಮಾರು 42 ಸಾವಿರ ಪೌರಕಾರ್ಮಿಕರಿದ್ದು, ಮುಂದಿನ ದಿನಗಳಲ್ಲಿ ಇವರೆಲ್ಲರಿಗೂ ಖಾಯಂ ನೇಮಕಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
GOOD NEWS : ಶೀಘ್ರದಲ್ಲೇ ರಾಜ್ಯದ 42,000 ಪೌರಕಾರ್ಮಿಕರ ಖಾಯಂ ನೇಮಕಾತಿಗೆ ಕ್ರಮ : ಸಿಎಂ ಬೊಮ್ಮಾಯಿ