ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಂತ ಕೈದಿಗಳು ಮೊಬೈಲ್ ಬಳಕೆ ಮಾಡಿದ್ದು, ಅದರಲ್ಲಿ ವೀಡಿಯೋ ಚಿತ್ರೀಕರಣ ಮಾಡಿಕೊಂಡು ವೈರಲ್ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಷೇಧ ಇದ್ದರೂ ಮೊಬೈಲ್ ಬಳಕೆ ಮಾಡಿ ವೀಡಿಯೋ ಚಿತ್ರೀಕರಣವನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮಾಡಿದ್ದರು. ಪರಪ್ಪನ ಅಗ್ರಹಾರ ಜೈಲಿನಲ್ಲಿನ ವೀಡಿಯೋ ಚಿತ್ರೀಕರಣವು ವೈರಲ್ ಕೂಡ ಆಗಿತ್ತು. ಅನುಮತಿ ಇಲ್ಲದೇ ಮೊಬೈಲ್ ಬಳಕೆ, ವೀಡಿಯೋ ಚಿತ್ರೀಕರಣದ ಹಿನ್ನಲೆಯಲ್ಲಿ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿತ್ತು. ಜೈಲು ಅಧಿಕಾರಿಗಳ ದೂರಿನ ಅನ್ವಯ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿದೆ. ಎನ್ ಸಿ ಆರ್ ದಾಖಲಿಸಿಕೊಂಡಿರುವಂತ ಪರಪ್ಪನ ಅಗ್ರಹಾರ ಪೊಲೀಸರು, ತನಿಖೆಯನ್ನು ಕೈಗೊಂಡಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೂವರು ಕೈದಿಗಳು ಮೊಬೈಲ್ ಬಳಸಿದ್ದರು. ಐಸಿಸ್ ಸಂಘಟನೆಯ ಉಗ್ರ ಜುಹಾದ್ ಹಮೀದ್ ಶಕೀಲ್ ಮುನ್ನಾ, ಸರಣಿ ಕೊಲೆ ಪ್ರಕರಣದ ಅಪರಾಧಿ ಉಮೇಶ್ ರೆಡ್ಡಿ, ಸ್ಮಗ್ಲಿಂಗ್ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವಂತ ತರುಣ್ ರಾಜು ಮೊಬೈಲ್ ಬಳಸಿದ್ದರು. ಈ ಎಲ್ಲಾ ಕೈದಿಗಳು ಮೊಬೈಲ್ ಬಳಸುವ ವೀಡಿಯೋ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ಎನ್ ಸಿ ಆರ್ ದಾಖಲಿಸಿಕೊಂಡಿರುವಂತ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.
BREAKING: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರದ ತಡೆ: ಪರಿಸರವಾದಿಗಳ ಹೋರಾಟಕ್ಕೆ ಗೆಲುವು








