ಬೆಂಗಳೂರು: ನಗರದ ಹೃದಯ ಭಾಗದಲ್ಲಿರುವಂತ ಮೆಜೆಸ್ಟಿಕ್ ಬಳಿಯಲ್ಲಿ ರಸ್ತೆ ಬದಿಯಲ್ಲಿ ಖಾಸಗಿ ಬಸ್ ಒಂದನ್ನು ಪಾರ್ಕ್ ಮಾಡಲಾಗಿತ್ತು. ಈ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ರಸ್ತೆಯಲ್ಲೇ ಹೊತ್ತಿ ಉರಿದಿದೆ.
ಬೆಂಗಳೂರಿನ ಮೆಜೆಸ್ಟಿಕ್ ಬಳಿಯ ರಸ್ತೆಯಲ್ಲಿ ನಿಲ್ಲಿಸಿದ್ದಂತ ಖಾಸಗಿ ಬಸ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗಿಸಿ ಹೊತ್ತಿ ಉರಿದಿದೆ. ಕೆಎ 22, ಬಿ 5235 ಎಂಬ ಸಂಖ್ಯೆ ಬಸ್ ಹೊತ್ತಿ ಉರಿದಿರೋದಾಗಿ ತಿಳಿದು ಬಂದಿದೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸೋ ಕಾರ್ಯದಲ್ಲಿ ತೊಡಗಿದ್ದಾವೆ. ಬಸ್ ಗೆ ಬೆಂಕಿಯು ತಾಂತ್ರಿಕ ಕಾರಣದಿಂದ ಹೊತ್ತಿಕೊಂಡಿರಬಹುದು ಎನ್ನಲಾಗುತ್ತಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.
BREAKING : ಪಶ್ಚಿಮ ಬಂಗಾಳ ರಾಜ್ಯಪಾಲರ ‘ಕೂಚ್ ಬೆಹಾರ್’ ಭೇಟಿಗೆ ‘ಚುನಾವಣಾ ಆಯೋಗ’ ತಡೆ