ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಮುಡಾ ಹಗರಣ ಸಂಬಂಧ ಖಾಸಗಿ ದೂರು ದಾಖಲಾಗಿದೆ. ಈ ಹಿನ್ನಲೆಯಲ್ಲಿ ಮುಡಾ ಅಕ್ರಮ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧದ ಖಾಸಗಿ ದೂರಿನ ಬಗ್ಗೆ ವರದಿ ನೀಡುವಂತೆ ರಾಜ್ಯಪಾಲರು ಸರ್ಕಾರಕ್ಕೆ ಸೂಚಿಸಿದ್ದಾರೆ.
ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ ಎನ್ನಲಾಗುತ್ತಿದೆ. ಸಿಎಸ್ ಅವರಿಗೆ ನಿರಂತವಾಗಿ ವರದಿಯನ್ನು ಕೇಳುತ್ತಿದ್ದರೂ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮಾತ್ರ ಒಂದು ಬಾರಿಗೆ ಮಾತ್ರವೇ ಅವರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಇಷ್ಟಕ್ಕೇ ಸುಮ್ಮನಾಗದಂತ ರಾಜ್ಯಪಾಲರು ಹೆಚ್ಚಿನ ವಿವರಗಳೊಂದಿಗೆ ಮುಡಾ ಅಕ್ರಮದ ಸಂಬಂಧ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ದಾಖಲಾಗಿರುವಂತ ಖಾಸಗಿ ದೂರಿನ ಸಂಬಂಧ ವರದಿ ನೀಡುವಂತೆ ಸಿಎಸ್ ಅವರಿಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ.
ಅಂದಹಾಗೇ ರಾಜ್ಯ ವಿಧಾನಮಂಡಲದ ಅಧಿವೇಶನದ ವೇಳೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ರಾಜ್ಯಪಾಲ ಥಾವರ್ ಚಂದ್ ಹೆಗ್ಲೋಟ್ ಅವರಿಗೆ ಒಂದು ಬಾರಿಗೆ ಮುಡಾ ಅಕ್ರಮ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧ ದಾಖಲಾಗಿರುವಂತ ಖಾಸಗಿ ದೂರಿನ ಸಂಬಂಧ ವರದಿ ನೀಡಿದ್ದರು.