ಮಧ್ಯಪ್ರದೇಶ: ಇಲ್ಲಿನ ಗುನಾ ಜಿಲ್ಲೆಯ ಏರ್ ಸ್ಟ್ರಿಪ್ ನಲ್ಲಿ ಭಾನುವಾರ ತರಬೇತಿ ವಿಮಾನ ಅಪಘಾತಕ್ಕೀಡಾಗಿದ್ದು, ಇಬ್ಬರು ಪೈಲಟ್ ಗಳು ಗಾಯಗೊಂಡಿದ್ದಾರೆ.
ಖಾಸಗಿ ವಾಯುಯಾನ ಅಕಾಡೆಮಿಗೆ ಸೇರಿದ ಎರಡು ಆಸನಗಳ ಸೆಸ್ನಾ 152 ವಿಮಾನವು ಏರ್ ಸ್ಟ್ರಿಪ್ ನಲ್ಲಿ ಅಪಘಾತಕ್ಕೀಡಾಗಿದೆ.
ಮಧ್ಯಾಹ್ನ 1.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಎಂಜಿನ್ ವೈಫಲ್ಯದಿಂದಾಗಿ 40 ನಿಮಿಷಗಳ ಕಾಲ ಗಾಳಿಯಲ್ಲಿ ಹಾರಾಟ ನಡೆಸಿತ್ತು ಎಂದು ಗುನಾ ಕಂಟೋನ್ಮೆಂಟ್ ಪೊಲೀಸ್ ಠಾಣೆಯ ಉಸ್ತುವಾರಿ ದಿಲೀಪ್ ರಾಜೋರಿಯಾ ಪಿಟಿಐಗೆ ತಿಳಿಸಿದ್ದಾರೆ.
ಗಾಯಗೊಂಡ ಇಬ್ಬರು ಪೈಲಟ್ ಗಳು ಅಪಾಯದಿಂದ ಪಾರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪರೀಕ್ಷೆ ಮತ್ತು ನಿರ್ವಹಣೆಗಾಗಿ ವಿಮಾನವು ಕೆಲವು ದಿನಗಳ ಹಿಂದೆ ಇಲ್ಲಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಮುಡಾ ಹಗರಣ’: ‘JDS ಪಕ್ಷ’ದಿಂದ ಸಿದ್ಧರಾಮಯ್ಯ ಬದಲಿ ನಿವೇಶನ ಕೋರಿ ಬರೆದಿದ್ದ ‘ಪತ್ರ ರಿಲೀಸ್’
‘ಚಂದ್ರಗುತ್ತಿ ದೇವಸ್ಥಾನ’ದ ಸರ್ವಾಂಗೀಣ ವಿಕಾಸಕ್ಕೆ ಕ್ರಮ: ಸಚಿವ ಮಧು ಬಂಗಾರಪ್ಪ