ಬೆಂಗಳೂರು : ರಾಜ್ಯದ ಖಾಸಗಿ ಶಾಲೆಗಳು ಮೇ. 29 ರಿಂದ ತರಗತಿಗಳನ್ನು ಆರಂಭಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಶಿಕ್ಷಣ ಇಲಾಖೆ ಹೊರಡಿಸಿರುವ ಮಾರ್ಗಸೂಚಿ ಮತ್ತು ಸುತ್ತೋಲೆ ಅನುಸಾರ ಎಲ್ಲ ಶಾಲೆಗಳು ಮೇ. 29 ರಿಂದ ತರಗತಿಗಳನ್ನು ಆರಂಭಿಸಬೇಕು ಎಂದು ಸೂಚನೆ ನೀಡಲಾಗಿದೆ. ರಾಜ್ಯದ ಹಲವು ಖಾಸಗಿ ಶಾಲೆಗಳು ಬೇಸಿಗೆ ರಜೆಯನ್ನು ಕಡಿತಗೊಳಿಸಿ ಮೇ ತಿಂಗಳ ಆರಂಭದಲ್ಲೇ ತರಗತಿಗಳನ್ನು ಆರಂಭಿಸಿ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿವೆ. ಹೀಗಾಗಿ ಶಿಕ್ಷಣ ಇಲಾಖೆ ಈ ಕ್ರಮ ಕೈಗೊಂಡಿದೆ.
ಶೈಕ್ಷಣಿಕ ಮಾರ್ಗಸೂಚಿ ಮತ್ತು ಸುತ್ತೋಲೆಯಲ್ಲಿ ತಿಳಿಸಿರುವ ಪ್ರಕಾರವೇ ಮೇ. 29 ರಿಂದ ಖಾಸಗಿ ಶಾಲೆಗಳು ತರಗತಿಗಳನ್ನು ಆರಂಭಿಸಬೇಕು. ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.