ಬೆಂಗಳೂರು: ರಾಜ್ಯದಲ್ಲಿ ಮೂಲ ಸೌಕರ್ಯವಿಲ್ಲದ ಖಾಸಗಿ ಶಾಲೆಗಳ ಮಾನ್ಯತೆಯನ್ನು ರದ್ದುಗೊಳಿಸಲಾಗುತ್ತದೆ ಎಂಬುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಅವರು, ರಾಜ್ಯದಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ಮುಂದಿನ ಒಂದು ವರ್ಷದೊಳಗೆ ಮೂಲ ಸೌಕರ್ಯ ಕಲ್ಪಿಸಿಕೊಳ್ಳದೇ ಇದ್ದಲ್ಲೇ, ಅವುಗಳ ಮಾನ್ಯತೆ ರದ್ದುಪಡಿಸಲಾಗುವುದು ಎಂಬುದಾಗಿ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳನ್ನು ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ದಿ ಪಡಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮನೆ ಒಡತಿಗೆ 2000 ರೂ.ಗಳ ಸಹಾಯಧನ ನೀಡುವ ಗೃಹಲಕ್ಷ್ಮಿ, ರಾಜ್ಯದ ಪ್ರತಿ ಮನೆ ಮನೆಗೆ ಉಚಿತ ವಿದ್ಯುತ್ ಒದಗಿಸುವ ಗೃಹಜ್ಯೋತಿ, ಮುಂತಾದ ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ.
BREAKING: ‘ಮಾಜಿ ಸಿಎಂ ವೀರಪ್ಪ ಮೊಯ್ಲಿ, ಮೊಹಮ್ಮದ್ ನಲಪಾಡ್’ ವಿರುದ್ಧ ‘ಜಾಮೀನು ರಹಿತ ವಾರೆಂಟ್’ ಜಾರಿ
BREAKING: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ‘ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ’ಗೆ ಭರ್ಜರಿ ಗೆಲುವು