ಕಲಬುರಗಿ : ಎಲ್ ಕೌಂಟರ್ ಮಾಡುವುದಾಗಿ ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಪತ್ರ ಬಂದಿದ್ದು, ವಿಧಾನಸೌಧದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ಬಿಜೆಪಿಯ ಮನುವಾದಿಗಳು ನನ್ನನ್ನು ಎನ್‌ಕೌಂಟರ್ ಮಾಡುವುದಾಗಿ ಜೀವ ಬೆದರಿಕೆಯ ಪತ್ರ ಬರೆದು ನನ್ನ ಕಚೇರಿಗೆ ಕಳುಹಿಸಿದ್ದಾರೆ. ಜಾತಿ ಹೆಸರನ್ನು ಸಹ ಉಲ್ಲೇಖಿಸಿ ಅವಾಚ್ಯ ಶಬ್ದಗಳಿಂದ ನನ್ನ ಕುಟುಂಬವನ್ನು ನಿಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.
ಕಲಬುರಗಿಯಿಂದ ಬೆಂಗಳೂರಿನ ವಿಕಾಸಸೌಧದ ನನ್ನ ಕಚೇರಿಗೆ ಪತ್ರ ಬಂದಿದ್ದು, ವಿಧಾನಸೌಧದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿದ್ದಾರೆ.