Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಛತ್ತೀಸ್‌ಗಢದಲ್ಲಿ ಭೀಕರ ದುರಂತ: ಐಇಡಿ ಬಾಂಬ್ ನಿಷ್ಕ್ರಿಯಗೊಳಿಸುವಾಗ ಸ್ಫೋಟ; ನಾಲ್ವರು ಯೋಧರು ಹುತಾತ್ಮ

02/05/2026 7:36 PM

BREAKING: ಪ್ರಸಾರ ಭಾರತಿ ನೂತನ ಅಧ್ಯಕ್ಷರಾಗಿ ಪ್ರಸೂನ್ ಜೋಶಿ ನೇಮಕ: ಕೇಂದ್ರ ಸರ್ಕಾರದ ಮಹತ್ವದ ಆದೇಶ

02/05/2026 7:29 PM

BREAKING: ರಾಜ್ಯದಲ್ಲಿ ಹಕ್ಕಿಜ್ವರದ ಭೀತಿ: ತುಮಕೂರಲ್ಲಿ ನವಿಲು H5N1 ನಿಂದ ಸಾವು ದೃಢ, ಕಟ್ಟೆಚ್ಚರಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ

02/05/2026 7:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾದರೆ ಅಧಿಕಾರಿಗಳೇ ಜವಾಬ್ದಾರರು: ಜಿಪಂ ಸಿಇಒಗಳಿಗೆ ಪ್ರಿಯಾಂಕ್‌ ಖರ್ಗೆ ಖಡಕ್ ಎಚ್ಚರಿಕೆ
KARNATAKA

ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾದರೆ ಅಧಿಕಾರಿಗಳೇ ಜವಾಬ್ದಾರರು: ಜಿಪಂ ಸಿಇಒಗಳಿಗೆ ಪ್ರಿಯಾಂಕ್‌ ಖರ್ಗೆ ಖಡಕ್ ಎಚ್ಚರಿಕೆ

By kannadanewsnow0908/04/2026 8:25 PM

ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಬೇಸಿಗೆಯ ಅವಧಿಯಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ (CEO) ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ಬುಧವಾರ ಬೆಂಗಳೂರಿನಿಂದ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಚಿವರು, ನೀರಿನ ಸರಬರಾಜಿನಲ್ಲಿ ಯಾವುದೇ ಲೋಪ ಉಂಟಾಗದಂತೆ ಎಚ್ಚರಿಕೆ ವಹಿಸಲು ಸೂಚಿಸಿದರು.

ಸಭೆಯ ಪ್ರಮುಖ ನಿರ್ಧಾರಗಳು ಮತ್ತು ಸೂಚನೆಗಳು:

  • ಶುದ್ಧ ನೀರಿನ ಘಟಕಗಳ (RO Plant) ದುರಸ್ತಿ: ರಾಜ್ಯದಲ್ಲಿ ಸ್ಥಗಿತಗೊಂಡಿರುವ ಶುದ್ಧ ನೀರಿನ ಘಟಕಗಳನ್ನು ಆದ್ಯತೆಯ ಮೇಲೆ ಸರಿಪಡಿಸಲು ಸರ್ಕಾರ ನಿರ್ಧರಿಸಿದೆ. ನೀರಿನ ಮೂಲವಿಲ್ಲದೆ ಬತ್ತಿ ಹೋಗಿರುವ ಅಥವಾ ನಿರ್ವಹಣೆ ಕೊರತೆಯಿಂದ ನಿಂತಿರುವ ಘಟಕಗಳ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಿ, ವಿವರವಾದ ನೀಲನಕ್ಷೆಯೊಂದಿಗೆ ವಾಸ್ತವ ವರದಿಯನ್ನು ಸಲ್ಲಿಸಲು ಸಚಿವರು ಆದೇಶಿಸಿದರು.

  • ವಿಶೇಷ ಅನುದಾನದ ಬಳಕೆ: ಬೇಸಿಗೆ ಎದುರಿಸಲು ಈಗಾಗಲೇ ಜಿಲ್ಲೆಗಳಿಗೆ ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದ್ದು, ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಬಾಡಿಗೆ ಟ್ಯಾಂಕರ್‌ಗಳು ಮತ್ತು ಖಾಸಗಿ ಕೊಳವೆಬಾವಿಗಳ ಬಿಲ್ ಪಾವತಿಯಲ್ಲಿ ವಿಳಂಬ ಮಾಡಬಾರದು ಎಂದು ಸೂಚಿಸಿದರು.

  • ಸಹಾಯವಾಣಿ ಸ್ಥಾಪನೆ: ಕಳೆದ ವರ್ಷದಂತೆ ಈ ವರ್ಷವೂ ತಾಲ್ಲೂಕು ಮಟ್ಟದಲ್ಲಿ ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆಗಳನ್ನು ಆಲಿಸಲು ಪ್ರತ್ಯೇಕ ಸಹಾಯವಾಣಿಗಳನ್ನು (Helpline) ತಕ್ಷಣವೇ ಆರಂಭಿಸಲು ನಿರ್ದೇಶಿಸಿದರು.

  • ಅಧಿಕಾರಿಗಳ ಹೊಣೆಗಾರಿಕೆ: ಕುಡಿಯುವ ನೀರಿನ ಸಮಸ್ಯೆ ಬಗ್ಗೆ ದೂರು ನೀಡುವ ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳಿಗೆ ಅಧಿಕಾರಿಗಳು ಸರಿಯಾದ ಉತ್ತರ ನೀಡಬೇಕು. ಅಧಿಕಾರಿಗಳು ಜವಾಬ್ದಾರಿಯಿಂದ ವರ್ತಿಸಬೇಕು ಮತ್ತು ಉತ್ತರದಾಯಿಗಳಾಗಿರಬೇಕು ಎಂದು ಸಚಿವರು ಹೇಳಿದರು.

ಅಧಿಕಾರಿಗಳ ಕಾರ್ಯವೈಖರಿಗೆ ಸಚಿವರ ತರಾಟೆ:

2023ನೇ ಸಾಲಿನ ಬಾಕಿ ಪಾವತಿಗೆ ಈಗ ಪತ್ರ ಬರೆಯುತ್ತಿರುವ ಗ್ರಾಮೀಣ ನೀರು ಸರಬರಾಜು ಇಲಾಖೆಯ ಎಂಜಿನಿಯರ್‌ಗಳ ಕಾರ್ಯವೈಖರಿಯ ಬಗ್ಗೆ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಇಂತಹ ವಿಳಂಬ ಧೋರಣೆಯನ್ನು ಸಹಿಸುವುದಿಲ್ಲ ಎಂದು ಅವರು ಎಚ್ಚರಿಸಿದರು.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ಡಾ. ಸಮೀರ್ ಶುಕ್ಲ, ಡಿ. ರಣ್‌ದೀಪ್ ಮತ್ತು ಇಲಾಖೆಯ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಗತಿಕ ನಾವೀನ್ಯತೆ ಕೇಂದ್ರವಾಗಿ ಕರ್ನಾಟಕದ ಸ್ಥಾನ ಮತ್ತಷ್ಟು ಭದ್ರ: ಸಚಿವ ಪ್ರಿಯಾಂಕ್ ಖರ್ಗೆ

ವಿಜಯಪುರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಮುಳುಗಿ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು

Share. Facebook Twitter LinkedIn WhatsApp Email

Related Posts

BREAKING: ರಾಜ್ಯದಲ್ಲಿ ಹಕ್ಕಿಜ್ವರದ ಭೀತಿ: ತುಮಕೂರಲ್ಲಿ ನವಿಲು H5N1 ನಿಂದ ಸಾವು ದೃಢ, ಕಟ್ಟೆಚ್ಚರಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ

02/05/2026 7:29 PM1 Min Read

ಅನಾರೋಗ್ಯದಿಂದಾಗಿ ಬೆಂಗಳೂರಿನ ಬೆಸ್ಕಾಂ ಜಾಗೃತ ದಳದ SP ಆಗಿದ್ದ ಲಾವಣ್ಯ ನಿಧನ

02/05/2026 6:41 PM1 Min Read

ಸಾಗರದ ರಾಧಾಕೃಷ್ಣ ಪಬ್ಲಿಕ್ ಶಾಲೆಗೆ ಸತತ 12 ವರ್ಷವೂ ICSE 10ನೇ ತರಗತಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ

02/05/2026 6:28 PM2 Mins Read
Recent News

BREAKING: ಛತ್ತೀಸ್‌ಗಢದಲ್ಲಿ ಭೀಕರ ದುರಂತ: ಐಇಡಿ ಬಾಂಬ್ ನಿಷ್ಕ್ರಿಯಗೊಳಿಸುವಾಗ ಸ್ಫೋಟ; ನಾಲ್ವರು ಯೋಧರು ಹುತಾತ್ಮ

02/05/2026 7:36 PM

BREAKING: ಪ್ರಸಾರ ಭಾರತಿ ನೂತನ ಅಧ್ಯಕ್ಷರಾಗಿ ಪ್ರಸೂನ್ ಜೋಶಿ ನೇಮಕ: ಕೇಂದ್ರ ಸರ್ಕಾರದ ಮಹತ್ವದ ಆದೇಶ

02/05/2026 7:29 PM

BREAKING: ರಾಜ್ಯದಲ್ಲಿ ಹಕ್ಕಿಜ್ವರದ ಭೀತಿ: ತುಮಕೂರಲ್ಲಿ ನವಿಲು H5N1 ನಿಂದ ಸಾವು ದೃಢ, ಕಟ್ಟೆಚ್ಚರಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ

02/05/2026 7:29 PM

ಇರಾನ್ ಕಾರ್ಯಾಚರಣೆ ಬೆನ್ನಲ್ಲೇ ಕ್ಯೂಬಾ ವಶಕ್ಕೆ ಪಡೆಯಲಿದೆಯೇ ಅಮೆರಿಕ? ಅಧ್ಯಕ್ಷ ಟ್ರಂಪ್ ಸ್ಫೋಟಕ ಹೇಳಿಕೆ!

02/05/2026 7:16 PM
State News
KARNATAKA

BREAKING: ರಾಜ್ಯದಲ್ಲಿ ಹಕ್ಕಿಜ್ವರದ ಭೀತಿ: ತುಮಕೂರಲ್ಲಿ ನವಿಲು H5N1 ನಿಂದ ಸಾವು ದೃಢ, ಕಟ್ಟೆಚ್ಚರಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ

By kannadanewsnow0902/05/2026 7:29 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಹಕ್ಕಿ ಜ್ವರದ (H5N1) ಆತಂಕ ಶುರುವಾಗಿದ್ದು, ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ ಮೃತಪಟ್ಟಿದ್ದ ನವಿಲುಗಳಿಗೆ ಹಕ್ಕಿ ಜ್ವರ ತಗುಲಿರುವುದು…

ಅನಾರೋಗ್ಯದಿಂದಾಗಿ ಬೆಂಗಳೂರಿನ ಬೆಸ್ಕಾಂ ಜಾಗೃತ ದಳದ SP ಆಗಿದ್ದ ಲಾವಣ್ಯ ನಿಧನ

02/05/2026 6:41 PM

ಸಾಗರದ ರಾಧಾಕೃಷ್ಣ ಪಬ್ಲಿಕ್ ಶಾಲೆಗೆ ಸತತ 12 ವರ್ಷವೂ ICSE 10ನೇ ತರಗತಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ

02/05/2026 6:28 PM

BREAKING: ಬೆಸ್ಕಾಂ ಜಾಗೃತ ದಳದ ಎಸ್ ಪಿ ಲಾವಣ್ಯ ನಿಧನ: ಪೊಲೀಸ್ ಇಲಾಖೆಯಲ್ಲಿ ಶೋಕ

02/05/2026 5:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.