ನವದೆಹಲಿ: ಮಣಿಪುರದ ಜಿರಿಬಾಮ್ನಲ್ಲಿ ಭದ್ರತಾ ಅಧಿಕಾರಿಗಳ ಬೆಂಗಾವಲು ವಾಹನದ ಮೇಲೆ ಭಾನುವಾರ ನಡೆದ ದಾಳಿಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಖಂಡಿಸಿದ್ದಾರೆ.
ರಾಜ್ಯದಲ್ಲಿನ ಜನಾಂಗೀಯ ಸಂಘರ್ಷವನ್ನು ಪರಿಹರಿಸಲು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಯಾವಾಗ ಕ್ರಮ ಕೈಗೊಳ್ಳುತ್ತಾರೆ ಎಂದು ಅವರು ಪ್ರಶ್ನಿಸಿದರು.
“ಕಳೆದ ವರ್ಷ ಮೇ 3 ರಂದು ಪ್ರಾರಂಭವಾದ ಹಿಂಸಾಚಾರವು ಇಂದಿಗೂ ಮುಂದುವರೆದಿದೆ. ಒಂದು ರಾಜ್ಯವು ಸಂಪೂರ್ಣವಾಗಿ ಛಿದ್ರಗೊಂಡಿದೆ. ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಯಾವಾಗ ನಿದ್ರೆಯಿಂದ ಎಚ್ಚರಗೊಳ್ಳುತ್ತಾರೆ? ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಗಾಯಗೊಂಡ ಮೂವರು ಸೈನಿಕರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ ಅವರು, “ಮಣಿಪುರದಲ್ಲಿ ಸಿಆರ್ಪಿಎಫ್ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಯಲ್ಲಿ ಸೈನಿಕನೊಬ್ಬ ಸಾವನ್ನಪ್ಪಿದ ಸುದ್ದಿ ಅತ್ಯಂತ ದುಃಖಕರವಾಗಿದೆ. ಅಗಲಿದ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ದುಃಖಿತ ಕುಟುಂಬಕ್ಕೆ ನನ್ನ ಆಳವಾದ ಸಂತಾಪಗಳು. ಗಾಯಗೊಂಡ ಮೂವರು ಸೈನಿಕರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಮುಖಂಡ ಮತ್ತು ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಕೂಡ ಹುತಾತ್ಮ ಯೋಧನಿಗೆ ಗೌರವ ಸಲ್ಲಿಸಿದರು.