ಬೆಂಗಳೂರು: ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ, ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ಕಿರುಕುಳ ಆರೋಪಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಮೊಮ್ಮಗ, ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಅವರು ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿರುವ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಅವರ ಲೈಂಗಿಕ ದೌರ್ಜನ್ಯದ ವಿಡಿಯೋಗಳನ್ನು ಒಳಗೊಂಡಿದೆ ಎನ್ನಲಾಗಿದೆ. ಲೈಂಗಿಕ ಕಿರುಕುಳ ಆರೋಪಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿಲ್ಲ ಅಂತ ಪ್ರಶ್ನೆ ಮಾಡಿದರು. ಇನ್ನೂ ಈ ಆರೋಪಗಳ ಬಗ್ಗೆ ತನಿಖೆ ನಡೆಸಲು ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿದೆ. ಪ್ರಜ್ವಲ್ ರೇವಣ್ಣ ಅವರು ನೂರಾರು ಮಹಿಳೆಯರ ಜೀವನವನ್ನು ಹಾಳು ಮಾಡಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.