ಬೆಂಗಳೂರು:ರಾಜ್ಯಸಭೆಗೆ ಆಯ್ಕೆಯಾಗಿರುವ ಕಾಂಗ್ರೆಸ್‌ನ ಸೈಯದ್ ನಾಸಿರ್ ಹುಸೇನ್ ಅವರ ಬೆಂಬಲಿಗರಲ್ಲಿ ಒಬ್ಬ ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ ಹಿರಿಯ ಮುಖಂಡರು, ವಿರೋಧ ಪಕ್ಷದ ನಾಯಕ ಆರ್ ಅಶೋಕ, ಆರಗ ಜ್ಞಾನೇಂದ್ರ ಮತ್ತಿತರರು ಮಂಗಳವಾರ ತಡರಾತ್ರಿ ವಿಧಾನಸೌಧ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.
ಗ್ರಾಮೀಣ ಪ್ರದೇಶದಲ್ಲಿ ಶಾಖೆಗಳನ್ನು ವಿಸ್ತರಿಸಿ: ಬ್ಯಾಂಕ್‌ಗಳಿಗೆ ಡಿಸಿಎಂ ಡಿಕೆ ಶಿವಕುಮಾರ್
ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮತ್ತು ಕಾಂಗ್ರೆಸ್ ಕಚೇರಿಗಳಿಗೆ ಮುತ್ತಿಗೆಗೆ ವಿಪಕ್ಷ ಬಿಜೆಪಿ ಕರೆ ಕೊಟ್ಟಿದ್ದಾರೆ.
”ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಈ ಘಟನೆ ಕಾಂಗ್ರೆಸ್ ಪಕ್ಷದ ವಿಕೃತ, ದೇಶದ್ರೋಹಿ ಮನಸ್ಥಿತಿಯನ್ನು ಪ್ರದರ್ಶನ ಮಾಡಿದೆ. ಚುನಾವಣೆಯಲ್ಲಿ ಗೆದ್ದಿದ್ದರೆ ನಿಮ್ಮ ಅಭ್ಯರ್ಥಿಗಳಿಗೆ ಜೈಕಾರ ಹಾಕಿ, ನಿಮ್ಮ ಪಕ್ಷಕ್ಕೆ ಜೈಕಾರ ಹಾಕಿ, ನಿಮ್ಮ ನಾಯಕರಿಗೆ ಜೈಕಾರ ಹಾಕಿ, ಅದು ಬಿಟ್ಟು ಪಾಕಿಸ್ತಾನ ಜಿಂದಾಬಾದ್ ಎಂದು ನಿಮ್ಮ ಪಕ್ಷದ ಕಾರ್ಯಕರ್ತರು ಘೋಷಣೆ ಕೂಗುತ್ತಾರಲ್ಲ ಸಿಎಂ ಸಿದ್ದರಾಮಯ್ಯ ಅವರೇ, ಮೂರು ರಾಜ್ಯಸಭೆ ಸ್ಥಾನ ಗೆದ್ದ ಮಾತ್ರಕ್ಕೆ ಮತೊಮ್ಮೆ ದೇಶ ವಿಭಜನೆ ಮಾಡಬಹುದು ಎಂದು ಕೊಂಡಿದ್ದೀರಾ?, ಪಾಕಿಸ್ತಾನ ಜಿಂದಾಬಾದ್ ಎಂಬುದೇ ಕಾಂಗ್ರೆಸ್ ಪಕ್ಷದ ಆತ್ಮಸಾಕ್ಷಿನಾ ಡಿಕೆ ಶಿವಕುಮಾರ್ ಅವರೇ ಎಂದು ವಿಪಕ್ಷ ನಾಯಕ ಅಶೋಕ್ ಕಿಡಿಕಾರಿದ್ದಾರೆ.