ಚಿಕ್ಕಮಗಳೂರು: ಪಾಕಿಸ್ತಾನ ಪರ ಪೋಸ್ಟ್ ಹಾಕಿದ್ದಂತ ಪ್ರಕರಣ ಸಂಬಂಧ ಆರೋಪಿ ಆಸ್ಗರ್ ಗೆ ನ್ಯಾಯಾಲಯವು ಜೂನ್.6ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಈ ಮೂಲಕ ಪಾಕ್ ಪರ ಪೋಸ್ಟ್ ಹಾಕಿದ್ದಂತ ಆರೋಪಿ ಜೈಲುಪಾಲಾಗುವಂತೆ ಮಾಡಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಸ್ಗರ್ ಎಂಬಾತ ಫೇಸ್ ಬುಕ್ ನಲ್ಲಿ ಪಾಕಿಸ್ತಾನ ಪರವಾಗಿ ಪೋಸ್ಟ್ ಹಾಕಿದ್ದನು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧವೂ ಅವಹೇಳನಕಾರಿ ಪೋಸ್ಟ್ ಮಾಡಿದ್ದನು.
ಆಸ್ಗರ್ ಹಾಕಿದ್ದಂತ ಪೋಸ್ಟ್ ಬಗ್ಗೆ ವ್ಯಾಪಕ ಆಕ್ರೋಶ, ಟೀಕೆ ವ್ಯಕ್ತವಾಗಿತ್ತು. ಅಲ್ಲದೇ ಕೊಪ್ಪ ಪೊಲೀಸ್ ಠಾಣೆಗೆ ಆಸ್ಗರ್ ವಿರುದ್ಧ ಕಾನೂನು ಕ್ರಮಕ್ಕೂ ದೂರು ನೀಡಲಾಗಿತ್ತು. ಈ ದೂರಿನ ಹಿನ್ನಲೆಯಲ್ಲಿ ಕೊಪ್ಪ ಠಾಣೆ ಪೊಲೀಸರು ಆಸ್ಗರ್ ಬಂಧಿಸಿದ್ದರು. ಎನ್ ಆರ್ ಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಾಲಯವು ಪಾಕಿಸ್ತಾನ ಪರವಾಗಿ ಪೋಸ್ಟ್ ಹಾಕಿದ್ದಂತ ಆರೋಪಿ ಆಸ್ಗರ್ ಗೆ ಜೂನ್.6ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
2024-25 ನೇ ಸಾಲಿನ ಶೈಕ್ಷಣಿಕ ಮಾರ್ಗದರ್ಶಿ ಪುಸ್ತಕ : ಶಾಲಾ ಮುಖ್ಯಸ್ತರಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ
BREAKING: ‘BBMP ಮುಖ್ಯ ಆಯುಕ್ತ’ರ ಹೆಸರಲ್ಲಿ ‘ಮೆಸೇಜ್’: ‘FIR’ ದಾಖಲು